ದಸರಾ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯರಿಗೂ ಅವಕಾಶ ನೀಡಬೇಕು -ಎಸ್.ಟಿ.ಸೋಮಶೇಖರ್

ಮೈಸೂರು: ಅರಮನೆ ಆವರಣದೊಳಗೆ ನಡೆಯುವ ದಸರಾ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೂ ಅವಕಾಶಗಳು ಸಿಗುವಂತೆ ಕಾರ್ಯಕ್ರಮ ರೂಪಿಸಬೇಕೆಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದರು.
ಭಾನುವಾರ ದಸರಾ ಸಿದ್ಧತೆಗಳ ಪ್ರಗತಿ ಪರಿಶೀಲನೆ ನಡಸಿದ ಸಚಿವರು, ಸ್ಥಳೀಯ ಕಲಾವಿದರೂ ಅವಕಾಶ ಕೋರಿ ಮನವಿ ಪತ್ರ ನೀಡಿದ್ದಾರೆ. ಅವರಿಗೂ ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಈ ಬಾರಿ ಸ್ತಬ್ದ ಚಿತ್ರಗಳಿಗೆ ಅವಕಾಶ ನೀಡಲಾಗುತ್ತಿದೆ. ಕೋವಿಡ್ ಜಾಗೃತಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳನ್ನು ಬಿಂಬಿಸುವ ಸ್ತಬ್ದಚಿತ್ರಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.
ಗಾನಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯ ಅವರ ಸ್ಮರಣಾರ್ಥವಾಗಿ ಅವರ ಹೆಸರಿನಲ್ಲಿ ಒಂದು ಕಾರ್ಯಕ್ರಮವನ್ನು ದಸರಾ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಸೇರಿಸಬೇಕೆಂಬ ಸಲಹೆ ಸಭೆಯಲ್ಲಿ ವ್ಯಕ್ತವಾಯಿತು.
ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ 250 ಜನರಿಗೆ, ದಸರಾ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ 1 ಸಾವಿರ ಜನರಿಗೆ ಹಾಗೂ ಜಂಬೂ ಸವಾರಿಗೆ 2 ಸಾವಿರ ಜನರಿಗೆ ಅವಕಾಶ ಕಲ್ಪಿಸಲು ಅನುಮತಿ ಕೋರಲಾಗಿದೆ ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಶರತ್ ಬಿ. ನಗರ ಪೆÇಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯಿತಿ ಸಿ.ಇ.ಒ. ಡಿ. ಭಾರತಿ, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಅಪರ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.