ಮೈಸೂರು: ಈ ಬಾರಿ ದುಂದು ವೆಚ್ಚದ ದಸರಾ ನಡೆಸಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ನಗರದಲ್ಲಿ ಶುಕ್ರವಾರ ಎಸ್.ಟಿ.ಎಸ್. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿಗಳ ಸೂಚನೆ ನೀಡಿದ್ದಾರೆÉ. ಹಾಗಾಗಿ ದುಂದು ವೆಚ್ಚದ ದಸರಾ ನಡೆಸಲ್ಲ ಎಂದು ಅವರು ತಿಳಿಸಿದರು.
ದಸರಾ ಹತ್ತು ದಿನದ ಕಾರ್ಯಕ್ರಮವಾಗಿದೆ. ಹಾಗಾಗಿ ಖರ್ಚು ವೆಚ್ಚಗಳು ಇರುತ್ತವೆ. ಇಷ್ಟಾದರೂ ಸಭೆಯಲ್ಲಿ ಸರಳ ಆಚರಣೆಗೆ ಒತ್ತು ನೀಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
5 ಕೋಟಿ ರೂ. ವನ್ನು ದಸರಾಕ್ಕಾಗಿ ಮೂಡಾದವರು ಬಿಡುಗಡೆ ಮಾಡಿದ್ದಾರೆ. ಕಳೆದ ಬಾರಿಯ ದಸರಾ ಅನುದಾನದಲ್ಲೇ 8 ಕೋಟಿ ರೂ. ಅನುದಾನ ಬಾಕಿ ಇದೆ ಎಂದು ಸಚಿವರು ತಿಳಿಸಿದರು.
ಶುಕ್ರವಾರ ಸಂಜೆ ದಸರಾ ಸಮಿತಿ ಸಂಬಂಧ ಸಭೆ ಕರೆಯಲಾಗಿದೆ. ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಸೇರಿದಂತೆ ಆಹ್ವಾನಿತರಾಗುತ್ತಿರುವ ಆಯಾ ಇಲಾಖೆಯ ತಲಾ ಒಬ್ಬರು ಉದ್ಘಾಟಕರ ಹೆಸರನ್ನು ಆಯ್ಕೆ ಮಾಡಿ ಕಳುಹಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಎಸ್ ಟಿಎಸ್ ತಿಳಿಸಿದರು.