ಹಾನಿ ಸಮೀಕ್ಷೆಲಿ ಲೋಪಕಂಡಲ್ಲಿ ನಿರ್ದಾಕ್ಷಣ್ಯ ಕ್ರಮ -ಕಾರಜೋಳ

ಬಾಗಲಕೋಟೆ: ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ರೈತರ ಬೆಳೆ ಹಾಗೂ ಮನೆಗಳ ಸಮೀಕ್ಷೆಯ ವರದಿಯಲ್ಲಿ ಲೋಪ ಕಂಡುಬಂದಲ್ಲಿ ನಿರ್ದಾಕ್ಷಣ್ಯವಾಗಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದಾಗಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಿದ್ಯಾಗಿರಿಯ ವಿವಿಧ ಸಂಘದ ಇಂಜಿನಿಯರ್ ಕಾಲೇಜಿನ ಸಭಾಭವನದಲ್ಲಿ ಶುಕ್ರವಾರ ಜರುಗಿದ ಜಿಲ್ಲೆಯ ಅತಿವೃಷ್ಠಿ, ಪ್ರವಾಹದಿಂದಾದ ಹಾನಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನೂರಕ್ಕೆ ಶೇ. 90ರಷ್ಟು ಕಲ್ಲು ಮತ್ತು ಮಣ್ಣಿನಿಂದ ಕಟ್ಟಿದ ಮನೆಗಳಿದ್ದು, ಮಳೆ ನಿಂತ ಮೇಲೆಯು ಸಹ ಮನೆಗಳು ಬೀಳುವ ಸಾಧ್ಯತೆ ಇರುವುದರಿಂದ ಸಮೀಕ್ಷೆಯನ್ನು ನಿಖರವಾಗಿ ಮಾಡಬೇಕು. ಯಾವುದೇ ರೀತಿಯಲ್ಲಿ ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ಕ್ರವಹಿಸಲು ತಿಳಿಸಿದರು.
ಜನರು ಹೊಟ್ಟೆ ಪಾಡಿಗಾಗಿ ಕೂಲಿ, ನಾಲಿ ಮಾಡಿಯಾದರೂ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ಸಮೀಕ್ಷೆಯಲ್ಲಿ ಲಿಬರರಾಗಿ ವರದಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸ್ವತಃ ತಾವೇ ಹಾನಿ ಪ್ರದೇಶಗಳಿಗೆ ತೆರಳಿ ಪರಿಶೀಲನೆಯಲ್ಲಿ ಲೋಪ ಕಂಡಲ್ಲಿ ನಿರ್ಧಾಕ್ಷಣ್ಯವಾಗಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದರು.