ನವದೆಹಲಿ: ಭಾನುವಾರ ಒಂದೇ ದಿನ ದೇಶಾದ್ಯಂತ 2,58,089 ಕೋವಿಡ್ ಸೋಂಕಿತರು ಪತ್ತೆಯಾಗಿದ್ದಾರೆ.
ಒಂದು ದಿನದಲ್ಲಿ 1,51,740 ಸೋಂಕಿತರು ಚೇತರಿಸಿಕೊಂಡಿದ್ದು, ಗುಣಮುಖರಾಗುತ್ತಿರುವವರ ಸಂಖ್ಯೆಯು ಕೂಡ ಗಣನೀಯವಾಗಿ ಹೆಚ್ಚಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ದೇಶದಲ್ಲಿ ಒಟ್ಟಾರೆ 16,56,341 ಸಕ್ರಿಯ ಪ್ರಕರಣಗಳಿವೆ. ಈ ಸೋಂಕಿನಿಂದ ಕಳೆದ 24 ಗಂಟೆಯಲ್ಲಿ 385 ಮಂದಿ ಸಾವನ್ನಪ್ಪಿರುವುದು ಸೇರಿದಂತೆ ಈವರೆಗೆ 486451 ಮಂದಿ ಮೃತಪಟ್ಟಿದ್ದಾರೆ.
ಕೊರೊನಾ ಸೋಂಕಿನ ಜೊತೆ ರೂಪಾಂತರಿ ಓಮಿಕ್ರಾನ್ 8,209 ಪ್ರಕರಣಗಳು ಕೂಡ ಪತ್ತೆಯಾಗಿವೆ.
ಈವರೆಗೆ 158.12 ಕೋಟಿಯಷ್ಟು ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಓಮಿಕ್ರಾನ್ ಸೋಂಕಿತರಾದ 8,209 ಜನರ ಪೈಕಿ 3,109 ಜನ ಗುಣಮುಖರಾಗಿದ್ದಾರೆ.
ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ರಾಜಸ್ಥಾನ, ದೆಹಲಿ ಮತ್ತು ಕರ್ನಾಟಕದಲ್ಲಿ ರೂಪಾಂತರಿ ವೈರಸ್ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಕಂಡುಬಂದಿದೆ.
ಚುನಾವಣೆ ಎದುರಾಗಿರುವ ರಾಜ್ಯಗಳಲ್ಲಿ ರೋಡ್ ಶೋ ನಿಷೇಧಿಸಲಾಗಿದೆ. ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಶಾಲಾಕಾಲೇಜುಗಳನ್ನು ಬಂದ್ ಮಾಡಿರುವುದು ಸೇರಿದಂತೆ ಹಲವು ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ.