ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.74.67 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕೆಎಸ್ ಇಇಬಿ ಅಧ್ಯಕ್ಷ ರಾಮಚಂದ್ರನ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು.
ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದರೆ ಯಾದಗಿರಿ ಕೊನೆಯ ಸ್ಥಾನ ಪಡೆದಿದೆ.
ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಉಡುಪಿ ಜಿಲ್ಲೆ 2 ನೇ ಸ್ಥಾನ, ಕೊಡಗು 3ನೇ ಸ್ಥಾನ, ಉತ್ತರ ಕನ್ನಡ 4ನೇ ಸ್ಥಾನದಲ್ಲಿದೆ ಎಂದು ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ 9ನೇ ಸ್ಥಾನದಲ್ಲಿದ್ದರೆ, ಬೆಂಗಳೂರು ದಕ್ಷಿಣ ಜಿಲ್ಲೆ 10ನೇ ಸ್ಥಾನದಲ್ಲಿದೆ. ಬೆಂಗಳೂರು ಉತ್ತರ ಜಿಲ್ಲೆ 11ನೇ ಸ್ಥಾನದಲ್ಲಿದೆ.
ಕಲಾ ವಿಭಾಗದ 1,34 876 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದ 2,07,087 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕಲಾ ವಿಭಾಗದಲ್ಲಿ ಶೇ. 61.22, ವಾಣಿಜ್ಯ ವಿಭಾಗದಲ್ಲಿ ಶೇ.75.89, ವಿಜ್ಞಾನ ವಿಭಾಗದಲ್ಲಿ ಶೇ. 85.71 ರಷ್ಟು ಫಲಿತಾಂಶ ಬಂದಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (KSEEB) ಅಧಿಕೃತ ವೆಬ್ಸೈಟ್ನಲ್ಲಿ karresults.nic.in ನಲ್ಲಿ ಫಲಿತಾಂಶ ಪರಿಶೀಲಿಸಬಹುದು ಎಂದು ರಾಮಚಂದ್ರನ್ ತಿಳಿಸಿದರು.