ದಿಗಂತ್, ಐದ್ರಿಂತರಿಂದ ಸಾಕಷ್ಟು ಮಾಹಿತಿ ಸಿಕ್ಕದೆ -ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್

ಬೆಂಗಳೂರು: ಚಿತ್ರ ನಟರಾದ ದಿಗಂತ್ ಮತ್ತು ಐದ್ರಿಂತರಿಂದ ಸಾಕಷ್ಟು ಮಾಹಿತಿ ಸಿಕ್ಕದೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದರು.
ನಗರದ ಸಿಸಿಬಿ ಕಚೇರಿ ಬಳಿ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಅವರು ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ದಿಗಂತ್ ಮತ್ತು ಐದ್ರಿಂತರಿಂದ ಸಾಕಷ್ಟು ಮಾಹಿತಿ ಸಿಕ್ಕಿದೆ. ಅವರನ್ನು ವಶಕ್ಕೆ ಪಡೆದಿಲ್ಲ. ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅವರಿಬ್ಬರನ್ನು ಕಳುಹಿಸಿಕೊಡಲಾಗಿದೆ ಎಂದು ಅವರು ತಿಳಿಸಿದರು.
ಡ್ರಗ್ಸ್ ದಂಧೆ ಪ್ರಕರಣದಲ್ಲಿ ವಿಚಾರಣೆಗಾಗಿ ಬುಧವಾರ ಹಾಜರಾಗುವಂತೆ ಸಿಸಿಬಿ ಪೊಲೀಸರು ದಿಗಂತ್ ಮತ್ತು ಐದ್ರಿಂತ ದಂಪತಿಗೆ ನೋಟಿಸ್ ನೀಡಿದ್ದರು.
ಈ ಹಿನ್ನೆಲೆಯಲ್ಲಿ 11 ಗಂಟೆಗೆ ಆಗಮಿಸಿದ ದಂಪತಿಗಳ ವಿಚಾರಣೆಯನ್ನು ಸಿಸಿಬಿ ಪೊಲೀಸರು ಪ್ರತ್ಯೇಕವಾಗಿ ನಡೆಸಿದ್ದಾರೆ.