ಮೈಸೂರು: ಮೈಸೂರು ದಸರಾ ಉದ್ಘಾಟನೆಗೆ ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ. ಸಿ.ಎನ್.ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ನಗರದಲ್ಲಿ ಶನಿವಾರ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಡಾ. ಸಿ.ಎನ್.ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದವರು ತಿಳಿಸಿದರು.
ಮೈಸೂರಿನ ಪೌರ ಕಾರ್ಮಿಕರಾದ ಮರಗಮ್ಮ, ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್, ಸ್ಟಾಫ್ ನರ್ಸ್ ರುಕ್ಮಿಣಿ, ಆಶಾ ಕಾರ್ಯಕರ್ತೆಯಾದ ನೂರ್ ಜಾನ್, ಪೆÇಲೀಸ್ ಕಾನ್ಸ್ ಟೇಬಲ್ ಪಿ. ಕುಮಾರ್, ಸಾಮಾಜಿಕ ಕಾರ್ಯಕರ್ತ ಆಯೂಬ್ ಅಹಮದ್ ಅವರನ್ನು ದಸರಾ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ಸಚಿವರು ತಿಳಿಸಿದರು.
ತಜ್ಞರ ತಂಡ ನೀಡಿದ ವರದಿ ಪ್ರಕಾರವಾಗಿಯೇ ದಸರಾ ಆಚರಣೆಯನ್ನು ಮಾಡಲಾಗುವುದು ಎಂದು ಸಚಿವರು ತಿಳಿಸಿದರು. ಇದರಲ್ಲಿ ಯಾವುದೇ ವ್ಯತ್ಯಾಸ ಮಾಡುವುದಿಲ್ಲ. ತಂಡದ ಶಿಫಾರಸಿ£್ಲಂತೆಯೇ ಎಲ್ಲ ಕಾರ್ಯಕ್ರಮಗಳನ್ನು ನಿಗದಿಪಡಿಸುತ್ತೇವೆ ಎಂದರು.
ದಸರಾ ಉದ್ಘಾಟನೆಗೆ ಚಾಮುಂಡಿ ಬೆಟ್ಟದಲ್ಲಿ 200 ಜನ ಸೇರಿದಂತೆ ಯಾವೆಲ್ಲ ನಿಯಮಗಳನ್ನು ವಿಧಿಸಲಾಗಿದೆಯೋ ಅದರಂತೆಯೇ ಕಾರ್ಯಕ್ರಮವನ್ನು ರೂಪಿಸುತ್ತೇವೆ ಎಂದು ಹೇಳಿದರು.
ಕೊರೊನಾ ಹಿನ್ನೆಲೆ ಪಾರ್ಕಿಂಗ್ ಗೆ ಎಲ್ಲ ಕಡೆ ಅನುಮತಿ ಕೊಡುವುದಿಲ್ಲ. ಸುರಕ್ಷತೆ ದೃಷ್ಟಿಯಿಂದ ಏನೆಲ್ಲ ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡುತ್ತೇವೆ ಎಂದು ಸಚಿವರು ಹೇಳಿದರು.