ಬೆಳಗಾವಿ: ಕುಡಿಯುವ ನೀರಿನ ಘಟಕಗಳ ನಿರ್ಹಣೆ ನೆಪದಲ್ಲಿ ರಾಜ್ಯದಲ್ಲಿ ಮೋಸ ನಡೆಯುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ಹೇಳಿದರು.
ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯನಿರ್ವಹಣೆ ಮೇಲೆ ಆನಲೈನ್ ಮೂಲಕ ನಿಗಾ ವಹಿಸುವ ವ್ಯವಸ್ಥೆಗೆ ಸಚಿವ ಈಶ್ವರಪ್ಪ ಚಾಲನೆ ನೀಡಿ ನಂತರ ಮಾತನಾಡಿದರು.
ಕುಡಿಯುವ ನೀರಿನ ಘಟಕಗಳ ನಿರ್ಹಣೆ ನೆಪದಲ್ಲಿ ರಾಜ್ಯದಲ್ಲಿ ಮೋಸ ನಡೆಯುತ್ತಿದೆ. ಆದ್ದರಿಂದ ಬೆಳಗಾವಿಯಲ್ಲಿ ನೂತನವಾಗಿ ಆರಂಭಿಸಲಾಗಿರುವ ಆನಲೈನ್ ಮಾಹಿತಿ ವ್ಯವಸ್ಥೆಯನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವ ಮೂಲಕ ನಿಗಾ ವಹಿಸಬೇಕು ಎಂದು ಈಶ್ವರಪ್ಪ ಸೂಚಿಸಿದರು.
ಕುಡಿಯುವ ನೀರಿನ ಘಟಕಗಳ ಕಾರ್ಯನಿರ್ವಹಣೆ ಮೇಲೆ ನಿರಂತರ ನಿಗಾ ವಹಿಸುವ ನೂತನ ಆನಲೈನ್ ವ್ಯವಸ್ಥೆಯನ್ನು ಇಡೀ ರಾಜ್ಯದಲ್ಲಿ ವಿಸ್ತರಿಸಲು ಅಗತ್ಯ ವ್ಯವಸ್ಥೆಯನ್ನು ಜಿಲ್ಲಾ ಪಂಚಾಯತ್ಗಳಿಗೆ ಕಲ್ಪಿಸಲು ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ಕುಡಿಯುವ ನೀರಿನ ಘಟಕಗಳನ್ನು ದುರಸ್ತಿ ಮಾಡಿ ಸಂಪೂರ್ಣ ನಿರ್ವಹಣೆಯ ಹೊಣೆಯನ್ನು ಒಂದು ಏಜೆನ್ಸಿಗೆ ಮಾತ್ರ ಒದಗಿಸುವ ಬಗ್ಗೆ ಚರ್ಚೆ ನಡೆಸಿದರು.
ರಾಜ್ಯದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು ಎಂಬುದು ಸರ್ಕಾರದ ಉದ್ದೇಶ. ಆದರೆ ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯನಿರ್ವಹಣೆಯ ಬಗ್ಗೆ ಅನೇಕ ದೂರುಗಳಿವೆ. ಆದ್ದರಿಂದ ಘಟಕಗಳ ಸಮರ್ಪಕ ಕಾರ್ಯನಿರ್ವಹಣೆಯ ಬಗ್ಗೆ ಖಚಿತಪಡಿಸಿಕೊಂಡು ಮುಂಬರುವ ದಿನಗಳಲ್ಲಿ ಘಟಕಗಳ ದುರಸ್ತಿ ಮತ್ತು ನಿರ್ವಹಣೆಯ ಬಗ್ಗೆ ಸಮರ್ಪಕ ಯೋಜನೆ ರೂಪಿಸಲಾಗುವುದು ಎಂದು ಈಶ್ವರಪ್ಪ ತಿಳಿಸಿದರು.
ಜಲಜೀವನ ಮಿಷನ್ ಯೋಜನೆಯಡಿ ಕೇಂದ್ರ ಸರ್ಕಾರವು ಶೇ. 50 ಹಣಕಾಸಿನ ನೆರವು ಒದಗಿಸುವುದರಿಂದ ಮುಂದಿನ ಮೂರು ವರ್ಷಗಳಲ್ಲಿ ಪ್ರತಿಯೊಂದು ಮನೆಗೆ ನಲ್ಲಿ ಮೂಲಕ ನೀರು ತಲುಪಿಸಬೇಕು ಎಂದು ಸಚಿವ ಈಶ್ವರಪ್ಪ ತಿಳಿಸಿದರು.