ಚುನಾವಣಾ ರಾಜಕೀಯದಿಂದ ಈಶ್ವರಪ್ಪ ನಿವೃತ್ತಿ

ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಉಪ ಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ನಾನು ಇದೇ ಮೇ.10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ‌ ಸ್ಪರ್ಧಿಸದಿರಲು ನಿರ್ಧರಿಸಿದ್ಧೇನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.

ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತನಾಗಲು ಇಚ್ಛಿಸಿದ್ದೇನೆ ಎಂದು ಬರೆದಿದ್ದಾರೆ.

ಆದ್ದರಿಂದ ಈ ಬಾರಿಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಮ್ಮ‌ಹೆಸರನ್ನು ಯಾವ ಕ್ಷೇತ್ರಕ್ಕೂ ಪರಿಗಣಿಸಬಾರದು‌ ಎಂದು ವಿನಂತಿಸಿದ್ದಾರೆ.

ಕಳೆದ 40 ವರ್ಷಗಳಿಂದ ಪಕ್ಷ ನನಗೆ ಎಲ್ಲವನ್ನೂ ನೀಡಿದೆ.ಬೂತ್ ಮಟ್ಟದಿಂದ ಉಪ ಮುಖ್ಯ ಮಂತ್ರಿ ವರೆಗೆ ಅಧಿಕಾರ ನೀಡಿದ ಹಿರಿಯರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ನಡ್ಡಾ ಅವರಿಗೆ ಬರೆದಿರುವ ಪತ್ರದಲ್ಲಿ ಈಶ್ವರಪ್ಪ ತಿಳಿಸಿದ್ದಾರೆ.