ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರಿಂದ ಈ ಬಾರಿಯ ದಸರಾ ಉದ್ಘಾಟನೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಉದ್ಘಾಟಿಸಲಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಎಸ್. ಎಂ ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು, ಕೇಂದ್ರದಲ್ಲಿ ಮಂತ್ರಿ ಅಗಿದ್ದವರು. ಅವರು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಹಾಗಾಗಿ ಅವರಿಂದ ಈ ಬಾರಿಯ ದಸರಾ ಮಹೋತ್ಸವದಲ್ಲಿ ದೇವಿ ಚಾಮುಂಡೇಶ್ವರಿ ಪೂಜೆ ಮಾಡಿಸಿ, ಮಹೋತ್ಸವ ಉದ್ಘಾಟಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ, ಶಿಕ್ಷಣ ತಜ್ಞರು, ಸಾಹಿತಿಗಳು ಸೇರಿದಂತೆ ಇತರರಿಂದ ಈ ವರೆಗಿನ ದಸರಾ ಉದ್ಘಾಟನೆಯಾಗಿದೆ. ಆದರೆ ಈ ಬಾರಿ ರಾಜಕಾರಣಿಯಾಗಿರುವ ಎಸ್.ಎಂ.ಕೃಷ್ಣ ಅವರು ಉದ್ಘಾಟನೆ ಮಾಡುತ್ತಾರೆ ಎಂದು ತಿಳಿಸಿದರು.