ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ: ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಚಾಮರಾಜನಗರದಲ್ಲಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದರು.
ಚಾಮರಾಜನಗರ ಜಿಲ್ಲೆಯ ವಿವಿಧೆಡೆ ರೈತರಿಂದ ಪ್ರತಿಭಟನೆ ನಡೆಯಿತು.
ಚಾಮರಾಜನಗರದ ಸಂತೇಮರಹಳ್ಳಿ ವೃತ್ತದ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರೈತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದರಿಂದ ಸಂಚಾರ ಅಸ್ತವ್ಯಸ್ತಗೊಂಡಿತು.
ಈ ಹಿನ್ನೆಲೆಯಲ್ಲಿ ಪೊಲೀಸರು 30ಕ್ಕೂ ಹೆಚ್ಚು ರೈತ ಸಂಘದ ಕಾರ್ಯ ಕರ್ತರನ್ನು ಬಂಧಿಸಿದರು.