ಕೇಂದ್ರ ಸರ್ಕಾರ ಹೊಣೆಗೇಡಿತನ ಪ್ರದರ್ಶಿಸಿರುವುದು ಖಂಡನೀಯ -ಹೆಚ್ ಡಿಕೆ

ಬೆಂಗಳೂರು: ಜಿಎಸ್‍ಟಿ ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ಹೊಣೆಗೇಡಿತನ ಪ್ರದರ್ಶಿಸಿರುವುದು ತೀವ್ರ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.
ಜಿಎಸ್‍ಟಿ ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ಹೊಣೆಗೇಡಿತನ ಪ್ರದರ್ಶಿಸಿರುವುದು ತೀವ್ರ ಖಂಡನೀಯ ಎಂದು ಅವರು ಟ್ವಿಟ್ ನಲ್ಲಿ ಬರೆದಿದ್ದಾರೆ.
ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ. ಈಗ ಕೊರೊನಾ ನೆಪ ಮುಂದಿಟ್ಟು ಅನ್ಯಾಯ ಮಾಡಿಬಿಟ್ಟರೆ ರಾಜ್ಯ ಸರ್ಕಾರಗಳು ಏನು ಮಾಡಬೇಕು ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಕೊರೊನಾ ಸಂಕಷ್ಟ ದೇವರ ಅಸಮಾನ್ಯ ಆಟ ಎನ್ನುವ ಮೂಲಕ ಒಕ್ಕೂಟ ವ್ಯವಸ್ಥೆಯ ರಾಜ್ಯಗಳ ಬಹುದೊಡ್ಡ ನಂಬಿಕೆಗೆ ಕೊಡಲಿಪೆಟ್ಟು ಕೊಟ್ಟಿದೆ. ಸುಲಭದ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳಿ. ಪಡೆದ ಸಾಲವನ್ನು ರಾಜ್ಯಗಳೇ ತೀರಿಸಿ ಎನ್ನುವ ಆಯ್ಕೆ ಮುಂದಿಟ್ಟು ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ ‘ಕೊಳ್ಳಿ’ ಇಟ್ಟಿದೆ ಎಂದು ಕುಮಾರಸ್ವಾಮಿ ಬರೆದಿದ್ದಾರೆ.
ಜಿಎಸ್‍ಟಿ ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ ಪ್ರದರ್ಶಿಸಿರುವುದು ತೀವ್ರ ಖಂಡನೀಯ ಎಂದು ಟ್ವೀಟ್ ಮಾಡಿದ್ದಾರೆ.