ಹಾಸನದಲ್ಲಿ 501 ಜನರಲ್ಲಿ ಕೊರೊನಾ ಸೋಂಕು ದೃಢ

ಹಾಸನ: ಜಿಲ್ಲೆಯಲ್ಲಿ ಭಾನುವಾರ 4 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ.
ಹೊಸದಾಗಿ 501 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 12,000ಕ್ಕೆ ಏರಿಕೆಯಾಗಿದೆ.
ಜಿಲ್ಲಾಸ್ಪತ್ರೆಯಲ್ಲಿ 3023 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 8730 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 55 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾನುವಾರ ಪತ್ತೆಯಾದ 501 ಕೊರೋನಾ ಸೋಂಕು ಪ್ರಕರಣಗಳಲ್ಲಿ 63 ಮಂದಿ ಅರಸೀಕೆರೆ ತಾಲ್ಲೂಕಿನವರಾಗಿದ್ದು, 87 ಮಂದಿ ಚನ್ನರಾಯಪಟ್ಟಣ ತಾಲ್ಲೂಕಿನವರು, ಆಲೂರು ತಾಲ್ಲೂಕಿನಲ್ಲಿ 24 ಜನ, 249 ಮಂದಿ ಹಾಸನ ತಾಲ್ಲೂಕು, 11 ಜನ ಹೊಳೆನರಸೀಪುರ ತಾಲ್ಲೂಕು, 30 ಮಂದಿ ಅರಕಲಗೂಡು ತಾಲ್ಲೂಕು ಹಾಗೂ ಬೇಲೂರು ತಾಲ್ಲೂಕಿನ 21 ಜನ, ಸಕಲೇಶಪುರ ತಾಲ್ಲೂಕಿನ 11 ಮಂದಿಗೆ ಹಾಗೂ ಹೊರ ಜಿಲ್ಲೆಯ 5 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ.