ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ಸಮೀಕ್ಷೆ ಅಪೆÇ್ಲೀಡ್ ಮಾಡಿಸಿ -ಆರ್. ಗಿರೀಶ್

ಹಾಸನ: ರಾಜ್ಯಾದ್ಯಂತ ಬೆಳೆ ಸಮೀಕ್ಷೆ ಉತ್ಸವ ಪ್ರಾರಂಭವಾಗಿದೆ. ಸೆ. 24ರೊಳಗೆ ರೈತರ ಮುಖಾಂತರ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ಸಮೀಕ್ಷೆಯನ್ನು ಅಪೆÇ್ಲೀಡ್ ಮಾಡಿಸುವ ಮೂಲಕ ನಿರ್ಧಿಷ್ಟ ಗುರಿ ತಲುಪಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಮಂಗಳವಾರ 2020-21ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕುರಿತು ತಾಲ್ಲೂಕು ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ 15 ಲಕ್ಷದ 16 ಸಾವಿರ ಭೂಮಿ ತಾಕುಗಳಿದ್ದು, ಇದುವರೆಗೂ 71 ಸಾವಿರ ಭೂಮಿ ತಾಕುಗಳನ್ನು ಅಪೆÇ್ಲೀಡ್ ಮಾಡಿದೆ ಹಾಗಾಗಿ ಎಲ್ಲಾ ತಾಲ್ಲೂಕುಗಳಲ್ಲಿನ ರೈತ ಸಂಪರ್ಕ ಕೇಂದ್ರಗಳಿಗೆ ಅಧಿಕಾರಿಗಳು ಭೇಟಿ ನೀಡಿ ಕರಪತ್ರಗಳನ್ನು ಹಂಚುವ ಮೂಲಕ ರೈತರಿಗೆ ಅರಿವು ಮೂಡಿಸಬೇಕು ಎಂದರು.
ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಪಿ.ಡಿ.ಓ. ಗಳು ರೈತರ ಸಭೆ ನಡೆಸಿ ಪಿ.ಆರ್. ಗಳ ಮೂಲಕ ಬೆಳೆ ಸಮೀಕ್ಷೆ ಆಪ್‍ನಲ್ಲಿ ಹೇಗೆ ಅಪೆÇ್ಲೀಡ್ ಮಾಡಬೇಕು ಮತ್ತು ಹೇಗೆ ಬಳಸಬೇಕು ಎಂಬುದರ ಕುರಿತು ಪೂರ್ಣ ಮಾಹಿತಿ ನೀಡುವಂತೆ ಕ್ರಮ ವಹಿಸಿ ಎಂದು ತಹಶಿಲ್ದಾರರಿಗೆ ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು.
ತಹಶಿಲ್ದಾರರು ಮತ್ತು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳು ಜೊತೆಗೂಡಿ ಸಭೆ ನಡೆಸಿ ಬೆಳೆ ಸಮೀಕ್ಷೆ ಆಪ್ ಬಳಸುವ ಕುರಿತು ಮಾಹಿತಿ ನೀಡಿ ಹಾಗೂ ಆ. 29ರೊಳಗೆ ಬೆಳೆ ಸಮೀಕ್ಷೆಯಲ್ಲಿ ಶೇ. 20ರಷ್ಟು ಅಭಿವೃದ್ಧಿ ಸಾಧಿಸಬೇಕು. ಹಾಗಾಗಿ ಹೆಚ್ಚಿನ ಪರಿಶ್ರಮದೊಂದಿಗೆ ತುರ್ತಾಗಿ ಅಪ್‍ಲೋಡ್ ಮಾಡಿಸುವಂತೆ ಅಧಿಕಾರಿಗಳಿಗೆ ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಉಪ ವಿಭಾಗಾಧಿಕಾರಿ ಡಾ|| ನವೀನ್ ಭಟ್, ಜಂಟಿ ಕೃಷಿ ನಿರ್ದೇಶಕರಾದ ರವಿಕುಮಾರ್, ತಹಶೀಲ್ದಾರರಾದ ಶಿವಶಂಕರಪ್ಪ, ಸಂತೋಷ್ ಕುಮಾರ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಯೋಗೇಶ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.