ದೇವೇಗೌಡರಿಂದ ಜನಧ್ವನಿ ಆಂದೋಲನ – ವೈ.ಎಸ್.ವಿ. ದತ್ತಾ

ಚಿಕ್ಕಮಗಳೂರು: ಕೆಲ ಕಾಯ್ದೆಗಳಿಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ನೇತೃತ್ವದಲ್ಲಿ ಜನಧ್ವನಿ ಆಂದೋಲನವನ್ನು ಆ. 24ರಂದು ನಗರದಲ್ಲಿ ನಡೆಸಲಾಗುವುದು ಎಂದು ಜೆಡಿಎಸ್ ಮುಖಂಡ ವೈ.ಎಸ್.ವಿ. ದತ್ತಾ ತಿಳಿಸಿದರು.
ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಸೋಮವಾರ ಬೆಳಿಗ್ಗೆ 11 ಗಂಟೆಗೆ ಆಂದೋಲನ ಆರಂಭವಾಗಲಿದೆ ಎಂದು ತಿಳಿಸಿದ ಅವರು ಅಂದು ಸಾರ್ವಜನಿಕರ ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದರು.
ವಿವಿಧ ಪ್ರಗತಿಪರ ಸಂಘಟನೆಗಳ ಜೊತೆಗೆ ನಡೆಯುವ ಸಂವಾದದಲ್ಲಿ ದೇವೇಗೌಡರು ಪಾಲ್ಗೊಳ್ಳುವವರು. ನಂತರ 3:30ಕ್ಕೆ ಮೂಡಿಗೆರೆ ತಾಲೂಕಿನ ಅತಿವೃಷ್ಟಿ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆಂದರು.
ವಿಧಾನಪರಿಷತ್ ಉಪಸಭಾಪತಿ ಎಸ್. ಎಲ್. ಧರ್ಮೇಗೌಡ, ಮಾಜಿ ಸಚಿವ ಬಿ ಬಿ ನಿಂಗಯ್ಯ, ವಿಧಾನಪರಿಷತ್ ಸದಸ್ಯ ಎಸ್. ಎಲ್. ಬೋಜೇಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಂಜನ್ ಅಜಿತ್ ಕುಮಾರ್ ಅವರುಗಳು ಈ ಸಮದರ್ಭದಲ್ಲಿ ಉಪಸ್ಥಿತರಿದ್ದರು.