ಹಿಜಾಬ್ ವಿವಾದ : ಕಾಲೇಜುಗಳಿಗೆ ಫೆ.16ರ ವರೆಗೆ ರಜೆ

ಬೆಂಗಳೂರು: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಉನ್ನತ ಶಿಕ್ಷಣ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ರಜಾದಿನವನ್ನು ಫೆಬ್ರವರಿ 16 ರವರೆಗೆ ವಿಸ್ತರಿಸಲಾಗಿದೆ.

ಪರೀಕ್ಷೆಗಳು ನಿಗದಿತ ಸಮಯಕ್ಕೆ ನಡೆಯಲಿದ್ದು, ಆನ್‍ಲೈನ್ ತರಗತಿಗಳನ್ನು ನಡೆಸಲು ಸೂಚನೆ ನೀಡಲಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್  ತಿಳಿಸಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಇಬ್ಬರೂ ಪಿಯುಸಿ ಮತ್ತು ಪದವಿ  ಕಾಲೇಜುಗಳನ್ನು ಪುನರಾರಂಭಿಸುವ ಬಗ್ಗೆ ಫೆಬ್ರವರಿ 14 ರಂದು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು.

ಹಿಜಾಬ್ ವಿವಾದವನ್ನು ಗಮನದಲ್ಲಿಟ್ಟುಕೊಂಡು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ (ಡಿಸಿಟಿಇ) ಫೆಬ್ರವರಿ 9 ರಿಂದ ಫೆಬ್ರವರಿ 11 ರವರೆಗೆ ಸಂಸ್ಥೆಗಳನ್ನು ಮುಚ್ಚುವುದಾಗಿ ಘೋಷಿಸಿತ್ತು, ಆದರೆ ಈಗ ಅದನ್ನು ಮುನ್ನೆಚ್ಚರಿಕೆಯಾಗಿ ವಿಸ್ತರಿಸಲಾಗಿದೆ ಎಂದು  ಹೇಳಿದ್ದಾರೆ.

ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜುಗಳು, ಡಿಪ್ಲೊಮಾ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಿಗೆ ಈ ರಜೆ ಅನ್ವಯಿಸುತ್ತದೆ ಎಂದು ತಿಳಿಸಿದ್ದಾರೆ.