ಬೆಂಗಳೂರು: ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿದಾಯಕ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಿರಿಯರ ಬದುಕನ್ನು ಕೇವಲ ಆದರ್ಶ ಎಂದುಕೊಳ್ಳದೆ, ಸಮಾಜಮುಖಿಯಾಗಿ ಕೆಲಸ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಹೇಳಿದರು.
ಮಂಗಳವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಉದ್ಘಾಟಿಸಿ ಸಿಎಂ ಮಾತನಾಡಿದರು.
ಈ ಬಾರಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು, ಘನತೆಯ ಬಾಳಿನೊಂದಿಗೆ ವಯೋಪಕ್ವತೆ, ವಿಶ್ವದಾದ್ಯಂತ ಹಿರಿಯ ಜೀವಿಗಳಿಗೆ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳನ್ನು ಸದೃಢಗೊಳಿಸುವುದರ ಮಹತ್ವ’ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದು ಹೇಳಿದರು
ಹಿರಿಯನ್ನು ಗೌರವದಿಂದ ಕಾಣಬೇಕು. ಅವರ ಅನುಭವಗಳನ್ನು ಗೌರವರಿಸಿ ಪಾಲಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಹಿರಿಯರ ಕೊಡುಗೆಗಳು ಹಾಗೂ ಅವರ ಮಾರ್ಗದರ್ಶನ ದಿಂದ ಜೀವನದಲ್ಲಿ ಏಳಿಗೆಯನ್ನು ಕಾಣಬಹುದು ಎಂದು ಸಿಎಂ ತಿಳಿಸಿದರು.
ನಮ್ಮ ಆತ್ಮಸಾಕ್ಷಿಯೇ ನ್ಯಾಯಾಲಯವಿದ್ದಂತೆ ಎಂದು ಮಹಾತ್ಮಾಗಾಂಧೀಜಿ ಹೇಳಿದ್ದರು. ಸಮಾಜದಲ್ಲಿ ಇಂದೂ ಮೌಢ್ಯಗಳು, ಕಂದಾಚಾರಗಳಿವೆ. ಇವುಗಳಿಗೆ ಜೋತುಬೀಳದೇ ವೈಚಾರಿಕತೆಯನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಸಲಹೆ ನೀಡಿದರು.
2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ ಸುಮಾರು 57.91ಲಕ್ಷದಷ್ಟು ಹಿರಿಯ ನಾಗರಿಕರಿ ದ್ದಾರೆ. ಇತ್ತೀಚಿನ ದಿನಗಳಲ್ಲಿ ವೃದ್ಧಾಶ್ರಮಗಳು ಹೆಚ್ಚುತ್ತಿವೆ. ಇದಕ್ಕೆ ಕಾರಣ, ಮಕ್ಕಳು ವಿದೇಶದಲ್ಲಿ ನೆಲಿಸಿ, ತಂದೆತಾಯಿ ಯನ್ನು ಪೋಷಿಸಲು ಸಾಧ್ಯವಾಗದೆ ವೃದ್ಧಾ ಶ್ರಮಗಳಿಗೆ ಸೇರಿಸುತ್ತಾರೆ. ಸುಮಾರು 50 ಲಕ್ಷ ಹಿರಿಯ ನಾಗರಿಕ ರಿಗೆ ಮಾಸಾಶನ ನೀಡ ಲಾಗುತ್ತಿದೆ. ಈ ಮಾಸಾಶನದ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗು ವುದು ಎಂದು ಸಿಎಂ ಭರವಸೆ ನೀಡಿದರು.