ಡ್ರಗ್ ದಂಧೆ: ಯಾರೇ ಪ್ರಭಾವಿಗಳಿದ್ದರೂ ಕಾನೂನಿನಂತೆ ತನಿಖೆ -ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು: ಡ್ರಗ್ ಜಾಲದಲ್ಲಿ ಯಾರೇ ಪ್ರಭಾವಿಗಳಿದ್ದರೂ ತನಿಖೆ ನಡೆಸುವುದು ಶತಸಿದ್ದ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಗೃಹ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ರಾಜ್ಯದ ಡ್ರಗ್ ಪ್ರಕರಣವನ್ನು ಸಿಸಿಬಿ ಪೆÇಲೀಸರು ಬಹಳ ಕ್ರಮಬದ್ಧವಾಗಿ ತನಿಖೆ ಮಾಡುತ್ತಿದ್ದಾರೆ. ಇದರಲ್ಲಿ ಪ್ರಭಾವಿಗಳಿದ್ದರೂ ಕಾನೂನಿನ ಅನ್ವಯ ವಿಚಾರಣೆ ನಡೆಸಲಾಗುತ್ತಿದೆ ಎಂದರು.
ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲು ಅನುಕೂಲ ಮಾಡಿಕೊಡಿ ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ. ಹಾಗಾಗಿ ಕಾನೂನು ತಜ್ಞರ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇನೆ. ಕಾನೂನು ಇನ್ಮಷ್ಟು ಬಿಗಿಗೊಳಿಸಲು ಕಾನೂನು ಸಚಿವರ ಜೊತೆಗೂ ಚರ್ಚೆ ಮಾಡುತ್ತೇನೆಂದರು.
ರಾಷ್ಟ್ರೀಯ ಕಾನೂನು ಶಾಲೆ ಮುಖ್ಯಸ್ಥರ ಜೊತೆ ಮಾತನಾಡಿದ್ದು, ಅಲ್ಲಿನ ಪ್ರಾಧ್ಯಾಪಕರ ಜೊತೆ ಚರ್ಚಿಸಿ ಕಾನೂನು ಬಿಗಿಗೊಳಿಸುವ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಅವರು ತಿಳಿಸಿದರು.
ಸಿಸಿಬಿ ಅಧಿಕಾರಿಗಳು ಯಾವುದೇ ಒತ್ತಡಕ್ಕೂ ಮಣಿಯದೆ ಮುಕ್ತವಾಗಿ ತನಿಖೆ ನಡೆಸುವಂತೆ ಸೂಚಿಸಿದ್ದೇನೆಂದು ಗೃಹ ಸಚಿವರು ಹೇಳಿದರು.