ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಸಿದ್ಧಾರೂಢ ಸ್ವಾಮೀಜಿ ಹೆಸರು

ಹುಬ್ಬಳ್ಳಿ: ಹುಬ್ಬಳ್ಳಿಯ ರೈಲ್ವೇ ನಿಲ್ದಾಣಕ್ಕೆ ಸದ್ಗುರು ಸಿದ್ಧಾರೂಢ ಸ್ವಾಮೀಜಿ ಹೆಸರು ನಾಮಕರಣ ಮಾಡಲಾಗಿದೆ.
ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಹುಬಳ್ಳಿಯ ಸಿದ್ಧಾರೂಢರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ಗೃಹ ಇಲಾಖೆ ರಾಜ್ಯ ಕಂದಾಯ ಇಲಾಖೆಗೆ ಸೂಚಿಸಿದೆ.
ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಸದ್ಗುರು ಸಿದ್ಧಾರೂಢರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿಯವರು ಪ್ರಸ್ತಾವನೆ ಸಲ್ಲಿಸಿದ್ದರು.
ಹುಬ್ಬಳ್ಳಿ ರೈಲು ನಿಲ್ದಾಣದ ಹೆಸರು ಬದಲಿಸಿ ಶ್ರೀ ಸಿದ್ಧಾರೂಢ ರೈಲ್ವೇ ನಿಲ್ದಾಣವೆಂದು ಹೆಸರು ಇಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.