ಚಾಮರಾಜನಗರ: ಹುಲಿ ಹಾಗೂ ಹುಲಿ ಮರಿಯ ಕಳೇಬರಗಳು ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದ ಬೀಳುಬಿದ್ದ ಕಂದಾಯ ಇಲಾಖೆ ಜಮೀನಿನ ಪೊದೆಯಲ್ಲಿ ಪತ್ತೆಯಾಗಿದೆ.
ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಚಾಮರಾಜನಗರ ಬಫರ್ ವಲಯ ವ್ಯಾಪ್ತಿಯಲ್ಲಿ ಹುಲಿಗಳ ಕಳೇಬರ ಕಂಡು ಬಂದಿದ್ದು, ಸಂಪೂರ್ಣವಾಗಿ ಕೊಳೆತು ಹೋಗಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.