ಹುಬ್ಬಳ್ಳಿ: ಮಾಜಿ ಸಚಿವ ವಿನಯ್ ಕುಲಕರ್ಣಿ ಬಿಜೆಪಿ ಸೇರ್ಪಡೆ ವಿಚಾರ ಕುರಿತು ನಮ್ಮ ಪಕ್ಷದಲ್ಲಿ ಚರ್ಚೆಯೇ ಆಗಿಲ್ಲ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಮಂಗಳವಾರ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ನಮ್ಮದು ರಾಷ್ಟ್ರೀಯ ಪಕ್ಷ ಆ ರೀತಿ ಸೇರ್ಪಡೆಯಾಗೋಕೆ ಬರೋಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದರು.
ನಮ್ಮ ರಾಷ್ಟ್ರೀಯ ನಾಯಕರು ಜಿಲ್ಲಾ ಹಾಗೂ ರಾಜ್ಯ ನಾಯಕರ ಜೊತೆ ಚರ್ಚೆ ಮಾಡುತ್ತಾರೆ. ಈ ಕುರಿತು ಇಲ್ಲಿಯವರೆಗೂ ಯಾವ ಚರ್ಚೆ ಆಗಿಲ್ಲ ಎಂದರು.
ಬಿಜೆಪಿ ಕೇಡರ್ ಬೇಸ್ ಪಾರ್ಟಿ ಸ್ಥಳೀಯ ನಾಯಕರೇ ಅವರನ್ನು ರಾಷ್ಟ್ರೀಯ ನಾಯಕರನ್ನ ಭೇಟಿ ಮಾಡಿಸಬೇಕು. ನಾನು ಇದೇ ಜಿಲ್ಲೆಯ ಜನಪ್ರತಿನಿಧಿ ವಿನಯ್ ಕುಲಕರ್ಣಿ ಬಿಜೆಪಿ ಸೇರ್ಪಡೆ ವಿಚಾರ ಬಗ್ಗೆ ನಂಗೇ ಏನು ಗೊತ್ತಿಲ್ಲ ಎಂದವರು ಹೇಳಿದರು.
ಡಿಕಶಿ ಮನೆ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತ ಅಲ್ಲ. ಅವರು ಪ್ರಾಮಾಣಿಕರಾಗಿದ್ದರೆ ಯಾಕೆ ಹೆದರಬೇಕು ಎಂದು ಜಗದೀಶ್ ಶೆಟ್ಟರ್ ಪ್ರಶ್ನಿಸಿದರು.
ಡಿಕೆ ಶಿವಕುಮಾರ್ ಅವರು ಹೊರಗಡೆ ಇದ್ದರೂ ನಾವು ಕಳೆದ ಬೈ ಏಲೆಕ್ಷನ್ ಗೆದ್ದಿದ್ದೇವೆ. ಈಗಲೂ ಎರಡೂ ಕ್ಷೇತ್ರಗಳಲ್ಲಿಯೂ ಗೆಲ್ಲುತ್ತೇವೆ ಎಂದರು.