ಜ್ಞಾನವಾಪಿ ಮಸೀದಿ ಪ್ರಕರಣ: ಹಿಂದೂಗಳಿಗೆ ಮತ್ತೆ ಜಯ

ನವದೆಹಲಿ: ಜ್ಞಾನವಾಪಿ ಮಸೀದಿ ಪ್ರಕರಣ ಸಂಬಂಧ ಹಿಂದೂಗಳಿಗೆ ಮತ್ತೆ ಜಯ ಸಿಕ್ಕಿದೆ.

ಜ್ಞಾನವಾಪಿ ಸಂಕೀರ್ಣದ ವ್ಯಾಸ್ ತೆಹ್ಖಾನಾದಲ್ಲಿ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅನುಮತಿ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಇಂದು ವಜಾಗೊಳಿಸಿದೆ.

ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಇತ್ತೀಚೆಗೆ ನೀಡಿದ್ದ ಪೂಜೆ ಮಾಡುವ ಆದೇಶ ಮುಂದುವರಿಸಲಾಗುವುದು ಎಂದು ಹೈಕೋರ್ಟ್ ತಿಳಿಸಿದೆ.

ಅಲಹಾಬಾದ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರ ಪೀಠವು ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುವ ಸಂಸ್ಥೆಯಾದ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸಲ್ಲಿಸಿದ ಮೇಲ್ಮನವಿಯನ್ನು ಆಲಿಸಿ ತೀರ್ಪನ್ನು ಕಾಯ್ದಿರಿಸಿದೆ.