ಬೆಂಗಳೂರು: ರಾಜ್ಯವಿಧಾನಸಭೆ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
59 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಜೆಡಿಎಸ್ ಮೂರನೇ ಪಟ್ಟಿಯಲ್ಲಿ ಘೋಷಣೆ ಮಾಡಿದೆ.
ಬಿಜೆಪಿ ಮತ್ತು ಕಾಂಗ್ರೆಸ್ನಿಂದ ಪಕ್ಷಾಂತರ ಮಾಡಿದ ಹಲವು ನಾಯಕರು ಜೆಡಿಎಸ್ ಪಕ್ಷದಿಂದ ಟಿಕೆಟ್ ಪಡೆದಿದ್ದಾರೆ.
ಬಿಜೆಪಿ ತೊರೆದು ಬಂದಿದ್ದ ಆಯನೂರು ಮಂಜುನಾಥ್ ಗೆ ಶಿವಮೊಗ್ಗ ನಗರ, ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಎನ್ ಆರ್ ಸಂತೋಷ್ ಗೆ ಅರಸೀಕೆರೆ ಕ್ಷೇತ್ರದ ಟಿಕೆಟ್ ನೀಡಲಾಗಿದೆ.
ಮೊದಲ ಪಟ್ಟಿಯಲ್ಲಿ ಜೆಡಿಎಸ್ 93 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿತ್ತು. ಎರಡನೇ ಪಟ್ಟಿಯಲ್ಲಿ 49 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಏ. 20ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದ್ದು 224 ಕ್ಷೇತ್ರಗಳ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 201 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
7 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸದೆ ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡಿದೆ.
ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ಗೆ ಬೆಂಬಲ ನೀಡ ಲಾಗಿದೆ.
ಕಲಬುರಗಿ ಗ್ರಾಮಾಂತರ ಕ್ಷೇತ್ರದಲ್ಲಿ ಸಿಪಿಐಎಂ ಪಾಂಡುರಂಗ ಮಾವಿನಕರ್ ಅವರಿಗೆ ಬಾಹ್ಯ ಬೆಂಬಲ ನೀಡಲು ನಿರ್ಧರಿಸಿದೆ.
ಬಾಗೇಪಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ ಸಿಪಿಐಎಂನಿಂದ ಡಾ. ಅನಿಲ್ ಕುಮಾರ್ ಸ್ಪರ್ಧೆ ಮಾಡಿದ್ದು, ಜೆಡಿಎಸ್ ಬೆಂಬಲ ಸೂಚಿಸಿದೆ.
ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರ ಸಿಪಿಐಎಂ ಅಭ್ಯರ್ಥಿ ಎಂ.ನಂಜೇಗೌಡ ಅವರಿಗೂ ಹಾಗೂ ಸಿ.ವಿ.ರಾಮನ್ನಗರ, ಮಹದೇವಪುರ ಮತ್ತು ವಿಜಯನಗರ ಕ್ಷೇತ್ರದಲ್ಲಿ ಆರ್ಪಿಐ ಅಭ್ಯರ್ಥಿಗಳಿಗೆ ಜೆಡಿಎಸ್ ಬೆಂಬಲ ನೀಡಿದೆ.