ಜೂಜಾಟ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ

ಮೈಸೂರು: ಜೂಜಾಟ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿ 79,270 ರೂ ವಶ ಪಡಿಸಿಕೊಂಡಿದ್ದಾರೆ.

ಮೈಸೂರಿನ ಕುವೆಂಪುನಗರ 2ನೇ ಹಂತ, ಎಂ ಬ್ಲಾಕ್ 10ನೇ ಕ್ರಾಸ್ ಮನೆಯೊಂದರಲ್ಲಿ ಹಣವನ್ನು ಪಣವಾಗಿಟ್ಟು ಅಂದರ್‌ಬಾಹರ್ ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದರ ಬಗ್ಗೆ  ಖಚಿತ ಮಾಹಿತಿ ಆಧರಿಸಿ ಸಿಸಿಬಿ ದಾಳಿ ನಡೆಸಿತು.

ಈ‌ ವೇಳೆ ಜೂಜಾಟದಲ್ಲಿ ತೊಡಗಿದ್ದ 6 ಜನರುಗಳನ್ನು ವಶಕ್ಕೆ ಪಡೆದು, ಜೂಜಾಟಕ್ಕೆ ಪಣವಾಗಿಟ್ಟಿದ್ದ ಒಟ್ಟು 79,270 ರೂ ಹಣ ಮತ್ತು ಇತರೆ ಪರಿಕರಗಳನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ.