ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ

ಮೈಸೂರು: ಕಬಿನಿ ಜಲಾಶಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದೆ.
ಜಿಲ್ಲೆಯ ಎಚ್. ಡಿ. ಕೋಟೆ ತಾಲೂಕಿನ ಬೀಚನಹಳ್ಳಿಲ್ಲಿಯಲ್ಲಿರು ಕಬಿನಿ ಜಲಾಶಯದಿಂದ ಭಾನುವಾರ 35 ಸಾವಿರ ಕ್ಯೂಸೆಕ್ಸ್ ನೀರನ್ನು ಕಪಿಲಾ ನದಿಗೆ ಹರಿಸಲಾಗಿದೆ.
ಕಬಿನಿ ಜಲಾನಯನ ಪ್ರದೆಶದಲ್ಲಿ ಮಳೆ ಸುರಿಯುತ್ತಿದ್ದು ಜಲಾಶಯಕ್ಕರ ಹೆಚ್ಚಿನ ಪ್ರಮಾನದಲ್ಲಿ ನೀರು ಹರಿದು ಬರುತ್ತಿದೆ.
ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಹಾಗೂ ಜನ-ಜಾನುವಾರು ಹಾಗೂ ಆಸ್ತಿಪಾಸ್ತಿ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಸುರೇಶ್ ಬಾಬು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಜಲಾಶಯದ ಗರಿಷ್ಠ ನೀರಿನ ಮಟ್ಟ 2284 ಅಡಿ. ಜಲಾಶಯ ಸಂಪೂರ್ಣವಾಗಿ ತುಂಬಿದೆ.