ಕನಕಪುರ‌‌ ಕ್ಷೇತ್ರದಲ್ಲಿ ‌ಅಣ್ಣ,ತಮ್ಮ ನಾಮಪತ್ರ‌ ಸಲ್ಲಿಕೆ

ಬೆಂಗಳೂರು: ಕನಕಪುರ‌ ವಿಧಾನಸಭಾ‌ ಕ್ಷೇತ್ರದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ‌ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.

ದಿಢೀರ್ ಬೆಳವಣಿಗೆಯಲ್ಲಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿರುವುದು ಪ್ರತಿಯೊಬ್ಬರಲ್ಲೂ ಕುತೂಹಲ ಉಂಟುಮಾಡಿದೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತವಾಗುವ ಆತಂಕದ ಹಿನ್ನೆಲೆಯಲ್ಲಿ ಮುಂಜಾಗ್ರತೆಯಾಗಿ ಡಿ.ಕೆ. ಸುರೇಶ್  ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಿಂದ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು ಆದರೆ  ದಿಢೀರ್ ಬೆಳವಣಿಗೆಯಲ್ಲಿ ಅವರು ಕನಕಪುರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಡಿ.ಕೆ ಶಿವಕುಮಾರ್ ಅವರು ಕನಕಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸಲ್ಲಿಸಿದ ನಾಮಪತ್ರದಲ್ಲಿ ತಾಂತ್ರಿಕ ದೋಷದಿಂದಾಗಿ ತಿರಸ್ಕೃತವಾಗುವ ಆತಂಕದ ಹಿನ್ನೆಲೆಯಲ್ಲಿ ಡಿ.ಕೆ ಸುರೇಶ್ ಮುಂಜಾಗ್ರತೆಯಾಗಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಆದರೆ ಸಹೋದರರು ಇಬ್ಬರು ಒಂದೇ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವುದು ಏಕೆ ಎಂಬುದು ಇನ್ನೂ ಗೊಂದಲ ಮೂಡಿಸಿದೆ.