ಮಾ. 9ರ ಕರ್ನಾಟಕ ಬಂದ್‌ ವಾಪಸ್ 

ಬೆಂಗಳೂರು: ಪಿಯುಸಿ ಪರೀಕ್ಷೆ ಇರುವ ಕಾರಣ ಮಾರ್ಚ್ 9 ರಂದು ಬೆಳಗ್ಗೆ 9 ಗಂಟೆಗೆ ಕಾಂಗ್ರೆಸ್ ಕರೆನೀಡಿದ್ದ ಕರ್ನಾಟಕ ಬಂದ್  ವಾಪಸ್ ಪಡೆಯಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಭ್ರಷ್ಟಾಚಾರ ವಿರೋಧಿಸಿ ಮಾ.9ರಂದು ಕಾಂಗ್ರೆಸ್‍ನಿಂದ 2 ಗಂಟೆ‌ ಬೆಂಗಳೂರು ಬಂದ್ ಕರೆ ಕೊಟ್ಟಿದ್ದೆವು, ಆದರೆ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂಬ ಕಾರಣದಿಂದ ಬಂದ್ ವಾಪಸ್ ಪಡೆದಿದ್ದೇವೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಬಿಜೆಪಿ ಭ್ರಷ್ಟಾಚಾರ ಖಂಡಿಸಿ ಮಾರ್ಚ್ 9 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 11 ಗಂಟೆವರೆಗೆ ಎಲ್ಲಾ ವ್ಯಾಪರಿಗಳು ಬಂದ್‌ಗೆ ಬೆಂಬಲ ನೀಡುವಂತೆ ಕೋರಿದ್ದರು.

ಇದೀಗ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಂದ್ ವಾಪಸು ಪಡೆದಿದ್ದೇವೆ ಎಂದು ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು.