ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ಕಾಂಗ್ರೆಸ್ ಸರ್ಕಾರದ ಪಾಪದ ಕೂಸು ಎಂದು ಸಂಸತ್ ಸದಸ್ಯೆ ಶೋಭಾ ಕರಂದ್ಲಾಜೆ ಆರೋಪಿಸಿದರು.
2013 ರಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದ ತಪ್ಪಿಗೆ ಇಂದು ತಲೆ ಕೊಡುವ ಪರಿಸ್ಥಿತಿ ಬಂದಿದೆ ಎಂದು ಶೋಭಾ ಕರಂದ್ಲಾಜೆ ಅವರು ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
2013ರಲ್ಲಿ ರಾಜ್ಯದ 19 ಸಂಸತ್ ಸದಸ್ಯರು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಕಸ್ತೂರಿ ರಂಗನ್ ವರದಿಯಿಂದ ಆಗುವ ಅನಾಹುತಗಳ ಬಗ್ಗೆ ಮನವರಿಕೆ ಮಾಡಿದ್ದರೂ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಅವರು ಹೇಳಿದರು.
ಈಗಲೂ ಕಾಲ ಮಿಂಚಿಲ್ಲ. ಕಸ್ತೂರಿ ರಂಗನ್ ವರದಿ ಕುರಿತು ಕೇರಳ ಮಾದರಿಯಲ್ಲಿಯೇ ಸಡಿಲಿಕೆ ನೀಡುವಂತೆ ಕರ್ನಾಟಕ ರಾಜ್ಯವು ಮನವಿ ಸಲ್ಲಿಸಲಿದೆ ಎಂದು ಶೋಭಾ ಕರಂದ್ಲಾಜೆ ತಿಳಿಸಿ ಜನ ಭಯಪಡುವ ಅಗತ್ಯವಿಲ್ಲ ವರದಿಯಿಂದ ಪಶ್ಚಿಮಘಟ್ಟದ ರೈತರಿಗೆ ತೊಂದರೆಯಾಗದಂತೆ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದು ವಿವರಿಸಿದ್ದಾರೆ ಎಂದು ತಿಳಿಸಿದರು.