ಮೈಸೂರು: ನಗರದಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ವಿವಿಧ ಅಂಗಡಿಗಳಲ್ಲಿ ಕಳವು ಮಾಡಿದ್ದ ಕಳ್ಳರಿಬ್ಬರನ್ನು ಪೆÇಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮೈಸೂರಿನ ಉದಯಗಿರಿ ನಿವಾಸಿಗಳಾದ ಜಬೀವುಲ್ಲಾ, ಸಯ್ಯದ್ ಹುಸೇನ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಲಾಕ್ ಡೌನ್ ಸಂದರ್ಭದಲ್ಲಿ ಕುವೆಂಪುನಗರ, ಸರಸ್ವತಿಪುರಂ ಸೇರಿದಂತೆ ವಿವಿಧ ಬಡಾವಣೆಗಳಲ್ಲಿನ ಅಂಗಡಿಗಳಲ್ಲಿ ಕಳ್ಳತನ ನಡೆಸಿದ್ದರು.
ಬಂಧಿತರಿಂದ ಒಂದೂವರೆ ಲಕ್ಷರೂ.ಮೌಲ್ಯದ ಕಳುವು ಮಾಡಲಾದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸರಸ್ವತಿಪುರಂ ಪೆÇಲೀಸ್ ಠಾಣೆ ಸಿಬ್ಬಂದಿಗಳಾದ ಮಂಜುನಾಥ್, ಅರಸು ಅವರುಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇವರಿಬ್ಬರನ್ನು ಬಂಧಿಸಿದ್ದಾರೆ.
ಡಿಸಿಪಿಗಳಾದ ಪ್ರದೀಪ್ ಗುಂಟಿ ಮತ್ತು ಗೀತ ಪ್ರಸನ್ನ, ಎಸಿಪಿ ಪೂರ್ಣ ಚಂದ್ರ ತೇಜಸ್ವಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.
ತಲೆ ಮರೆಸಿಕೊಂಡಿರುವ ಪ್ರಮುಖ ಆರೋಪಿ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.