ಲವ್ ಜಿಹಾದ್ ವಿರುದ್ಧ ಮಸೂದೆ ಜಾರಿ -ಸುನಿಲ್ ಕುಮಾರ್

ಬೆಳಗಾವಿ:ಮತಾಂತರ ನಿಷೇಧ ವಿಧೇಯಕಕ್ಕೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿರುವಾಗಲೇ ರಾಜ್ಯ ಸರ್ಕಾರ ಲವ್ ಜಿಹಾದ್ ವಿರುದ್ಧದ ಮಸೂದೆಯನ್ನು ಜಾರಿಗೆ ತರಲು ಮುಂದಾಗಿದೆ. 

ಈ ಬಗ್ಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ.ಸುನೀಲ್‍ಕುಮಾರ್ ಸುಳಿವು ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಲವ್ ಜಿಹಾದ್ ವಿರುದ್ಧವೂ ಕಾಯ್ದೆ ಜಾರಿ ಮಾಡುವುದಾಗಿ ಸಚಿವ ಸುನೀಲ್‍ಕುಮಾರ್ ಮಾಧ್ಯಮ ಪ್ರತಿ ನಿಧಿಗಳಿಗೆ ತಿಳಿಸಿದ್ದಾರೆ.

ನಾವು ಅಧಿಕಾರಕೆ ಬರುವ ಮುನ್ನವೇ ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆ ಪ್ರಸ್ತಾಪಿಸಿದ್ದೆವು. ಅದರಂತೆ ಈಗಾಗಲೇ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. ಮತಾಂತರ ನಿಷೇಧ ಕಾಯ್ದೆಯನ್ನೂ ಜಾರಿ ಮಾಡುತ್ತೇವೆ. ಸ್ಥಳೀಯ ಮಟ್ಟದಲ್ಲಿ ಯಾವ ರೀತಿಯಲ್ಲಿ ಮತಾಂತರವಾಗುತ್ತಿದೆ ಎಂಬುದು ನಮಗೆ ಗೊತ್ತಿದೆ ಎಂದರು.

ಕಾಂಗ್ರೆಸ್‍ನವರು ಯಾವ ಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ ಎಂಬುದನ್ನು ಹೇಳಲಿ ಎಂದು ಒತ್ತಾಯಿಸಿದರು.

ಸ್ವಾಮಿ ವಿವೇಕಾನಂದರು, ಮಹಾತ್ಮ ಗಾಂಧೀಜಿಯವರು ಕೂಡ ಮತಾಂತರದ ಬಗ್ಗೆ ಮಾತನಾಡಿದ್ದರು. ಬಲವಂತವಾಗಿ ಮತಾಂತರ ಆಗಬಾರದೆಂದು ಅವರು ಹೇಳಿದ್ದರು. ಹೀಗಾಗಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡುವುದಾಗಿ ಸುನಿಲ್ ಕುಮಾರ್ ಹೇಳಿದರು.

ಕೇವಲ ಒಂದು ಸಮುದಾಯವನ್ನು ಗುರಿಯಲ್ಲಿಟ್ಟುಕೊಂಡು ಮತಾಂತರ ನಿಷೇಧ ವಿಧೇಯಕ ತರುತ್ತಿಲ್ಲ. ಬಲವಂತದ ಮತಾಂತರಕ್ಕೆ ಕಡಿವಾಣ ಹಾಕಲು ಮತಾಂತರ ನಿಷೇಧ ವಿಧೇಯಕವನ್ನು ತರುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.