ಅ. 16 ಮತ್ತು 26 ರಂದು ಮಡಿಕೇರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ

ಮಡಿಕೇರಿ: ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಕೋವಿಡ್ ಸೋಂಕು ಹೆಚ್ಚಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಹೆಚ್ಚಾಗಿ ಜನ ಸಂದಣಿ ಸೇರುವುದು ಉಚಿತವಾಗಿರುವುದಿಲ್ಲ. ಆದ್ದರಿಂದ ಅ. 17ರಂದು ತಲಕಾವೇರಿಯಲ್ಲಿ ನಡೆಯುವ ತುಲಾ ಸಂಕ್ರಮಣ ಹಾಗೂ ಅ. 26ರಂದು ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾವನ್ನು ಸರಳವಾಗಿ ಆಚರಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಮತ್ತು ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಿ, ಆದೇಶವನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಹೊರಡಿಸಿದ್ದಾರೆ.