ಮಗಳ ಮೇಲೆ ಅತ್ಯಾಚಾರ ಎಸಗಿದ‌ ಪಾಪಿ ತಂದೆಗೆ ಜೀವಾವದಿ ಶಿಕ್ಷೆ

ಚಾಮರಾಜನಗರ: ಮಗಳ ಮೇಲೆ ಅತ್ಯಾಚಾರ ಮಾಡಿದ್ದ ಪಾಪಿ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿ ಚಾಮರಾಜನಗರ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ.

ಚಾಮರಾಜನಗರದ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎ.ಸಿ. ನಿಶಾರಾಣಿ (FTSC-1) ಅವರು ಅಪರಾಧಗೆ ಜೀವಿತಾವಧಿ ವರಗೆ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಚಾಮರಾಜನಗರ ಠಾಣೆಯೊಂದರಲ್ಲಿ  ಪೋಕ್ಸೊ ಕಾಯ್ದೆ ಅಡಿ ದಾಖಲಾದ ಪ್ರಕರಣದಲ್ಲಿ ಆರೋಪಿ ತನ್ನ ಮಗಳ ಮೇಲೆಯೆ ಅತ್ಯಾಚಾರವೆಸಗಿದ್ದ.

ನೊಂದ ಬಾಲಕಿ ಗರ್ಭಿಣಿಯಾಗಿದ್ದಳು, ಈ ಪ್ರಕರಣದಲ್ಲಿ 48 ವರ್ಷದ ಆರೋಪಿಯು ಎಸಗಿದ ಕೃತ್ಯ ಸಾಬೀತಾದ ಕಾರಣ ಅಪರಾಧಿಗೆ ಜೀವಿತಾವಧಿ ವರೆಗೆ (ಉಳಿದ ಜೀವಾವಧಿ) ಶಿಕ್ಷೆ ಮತ್ತು 30 ಸಾವಿರ ರೂ. ದಂಡವನ್ನು ವಿಧಿಸಿದೆ.

ಜೊತೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧೀಕಾರದಿಂದ 6 ಲಕ್ಷ ರೂ ಹಣವನ್ನು 30 ದಿನದ ಒಳಗೆ ನೊಂದ ಬಾಲಕಿಗೆ ಪರಿಹಾರದ ರೂಪದಲ್ಲಿ ನೀಡಬೇಕೆಂದು

ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಪ್ರಕರಣದ ತನಿಖೆಯನ್ನು ತನಿಖಾಧಿಕಾರಿಯಾದ ಪೊಲೀಸ್ ಇನ್ಸ್ಪೆಕ್ಟರ್ ಪಿ.ಎನ್.ಶೇಷಾದ್ರಿ ನಡೆಸಿ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.