ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ವ್ಯಕ್ತಿಗೆ 20 ವರ್ಷ ಕಠಿಣ ಶಿಕ್ಷೆ

ಮೈಸೂರು: ಮೂರೂವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ವ್ಯಕ್ತಿಗೆ ಮೈಸೂರಿನ ಪೆÇೀಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ಯಾಮಾಕಂರೋಸ್ ಅವರು 20 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಬಿಳಿಕೆರೆ ಪೆÇಲೀಸ್ ಠಾಣೆ ವ್ಯಾಪ್ತಿಯ ವಾಸಿ ಜಗದೀಶ್ (45) ಶಿಕ್ಷೆಗೊಳಗಾದ ವ್ಯಕ್ತಿ.

ಈತ 2019ರ ಆ. 15ರಂದು ಮಧ್ಯಾಹ್ನ ತನ್ನ ಮನೆ ಮುಂದೆ ಆಟವಾಡುತ್ತಿದ್ದ ಮೂರೂವರೆ ವರ್ಷದ ಮಗುವನ್ನು ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ.

ಈ ಸಂಬಂಧ ಬಿಳಿಕೆರೆ ಠಾಣೆ ಪೆÇಲೀಸರು ಈತನ ವಿರುದ್ಧ ಅತ್ಯಾಚಾರ ಮತ್ತು ಪೆÇೀಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಜಗದೀಶನಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಸರ್ಕಾರದ ಪರವಾಗಿ ಸರ್ಕಾರಿ ವಿಶೇಷ ಅಭಿಯೋಜಕರಾದ ಎಸ್. ಪುಷ್ಪಲತಾ ವಾದ ಮಂಡಿಸಿದ್ದರು.