ಮಣಿಪುರ ಘಟನೆ ನಾಚಿಕೆಗೇಡಿನ ಸಂಗತಿ: ಪ್ರಧಾನಿ ಮೋದಿ ಪ್ರತಿಕ್ರಿಯೆ

ನವದೆಹಲಿ: ಮಣಿಪುರ ಘಟನೆಯು ನಾಚಿಕೆಗೇಡಿನ ಸಂಗತಿಯಾಗಿದೆ. ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕಳೆದ ಎರಡು ತಿಂಗಳಿನಿಂದ ನಡೆಯುತ್ತಿರುವ ಮಣಿಪುರ ಹಿಂಸಾಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ದೇಶದ ಜನತೆಗೆ ಭರವಸೆ ನೀಡುತ್ತೇನೆ. ಪ್ರಕರಣದ ತಪ್ಪಿತಸ್ಥರನ್ನ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಕಾನೂನು ಎಲ್ಲಾ ಶಕ್ತಿಯೊಂದಿಗೆ ತನ್ನ ಕ್ರಮ ತೆಗೆದುಕೊಳ್ಳುತ್ತದೆ. ಮಣಿಪುರದ ಸಹೋದರಿಯರ ಜೊತೆಗೆ ನಡೆದ ಘಟನೆ ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ರಾಜಸ್ಥಾನ, ಮಣಿಪುರ ಅಥವಾ ಛತ್ತೀಸ್‌ಗಢ ಆಗಿರಲಿ, ನಮ್ಮ ಎಲ್ಲಾ ಮಹಿಳೆಯರಿಗೆ ರಕ್ಷಣೆ ನೀಡಲು ಕಠಿಣ ಕಾನೂನು ಜಾರಿ ಮಾಡಲು ನಾನು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ತಿಳಿಸುತ್ತೇನೆ ಎಂದು ಮೋದಿ ತಿಳಿಸಿದರು.

ರಾಜಕೀಯಕ್ಕಿಂತ ಮಿಗಿಲಾಗಿ ಮಹಿಳೆಯರ ರಕ್ಷಣೆ ಬಗ್ಗೆ ನಾವು ಚಿಂತಿಸಬೇಕು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡುತ್ತಿದ್ದಂತೆ ಇತ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಣಿಪುರ ಸಿಎಂ ಬಿರೇನ್ ಸಿಂಗ್‌ ಅವರ ಜತೆ ದೂರವಾಣಿ ಮೂಲಕ ಮಾತನಾಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಸೂಚನೆ ಕೊಟ್ಟಿದ್ದಾರೆ.