ಮಂಡ್ಯ: ಇಲ್ಲಿನ ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಅರ್ಚಕರು ಸೇರಿ ತ್ರಿಬಲ್ ಮರ್ಡರ್ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಮಂಡ್ಯ ಪೆÇಲೀಸರು ಯಶಸ್ವಿಯಾಗಿದ್ದಾರೆ.
ಆಂಧ್ರ ಪ್ರದೇಶದ ವಿಜಿ, ತೊಪ್ಪನಹಳ್ಳಿ ಗ್ರಾಮದ ಮಂಜ, ಅರೆಕಲ್ ದೊಡ್ಡಿ ಗ್ರಾಮದ ಗಾಂಧಿ ಬಂಧಿತ ಆರೋಪಿಗಳು.
ಆರೋಪಿಗಳ ಪತ್ತೆಗೆ ರಚನೆ ಮಾಡಿದ್ದ ಗ್ರಾಮಾಂತರ ಪೆÇೀಲಿಸ್ ಠಾಣಾ ವೃತ್ತ ನಿರೀಕ್ಷಕ ಎನ್.ವಿ.ಮಹೇಶ್ ಹಾಗೂ ಪೂರ್ವ ಪೆÇೀಲೀಸ್ ಠಾಣೆಯ ಪಿ.ಎಸ್.ಐ ಶರತ್ ಕುಮಾರ್ ನೇತೃತ್ವ ತಂಡಕ್ಕೆ ಆರೋಪಿಗಳು ಮದ್ದೂರು ತಾಲ್ಲೂಕಿನ ಸಾದೊಳಲು ಗೇಟ್ ಬಳಿ ಸಿಕ್ಕಿಬಿದ್ದರು.
ಅವರನ್ನು ಬಂಧಿಸಲು ಪೊಲೀಸರು ಮುಂದಾದಾಗ ಆರೋಪಿಗಳು ಪೊಲೀಸರ ಮೇಲೆ ಕಲ್ಲು ಮತ್ತು ಚಾಕುವಿನಿಂದ ಹಲ್ಲೆ ನಡೆಸಲು ಮುಂದಾದರು.
ಆಗ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಆಗಲೂ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಬೇರೆ ದಾರಿ ಇಲ್ಲದೆ ಪೊಲೀಸರು ಆರೋಪಿಗಳ ಮೇಲೆ ಗುಂಡು ಹಾರಿಸಿ ನಂತರ ಬಂಧಿಸಿದ್ದಾರೆ.
ಕಾರ್ಯಾಚರಣೆ ಸಂದರ್ಭದಲ್ಲಿ ಪೂರ್ವ ಪೆÇಲೀಸ್ ಠಾಣೆ ಪಿಎಸ್‍ಐ ಶರತ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಅನಿಲ್ ಕುಮಾರ್, ಕೃಷ್ಣ ಕುಮಾರ್ ರವರು ಗಾಯಗೊಂಡಿದ್ದಾರೆ.
ಗುಂಡೇಟಿನಿಂದ ಗಾಯಗೊಂಡ 3 ಮಂದಿ ಆರೋಪಿಗಳನ್ನು ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೆÇೀಲಿಸ್ ವರಿಷ್ಠಾಧಿಕಾರಿ ಕೆ ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.