ಬೆಂಗಳೂರು: ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ ನಿರ್ಲಕ್ಷ್ಯ ತೋರುವವರಿಗೆ ದುಬಾರಿ ದಂಡ ವಿಧಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದಿದ್ದರೆ 1 ಸಾವಿರ ರೂ. ಹಾಗೂ ಇತರೆ ಪ್ರದೇಶಗಳಲ್ಲಿ 500 ರೂ. ದಂಡ ವಿಧಿಸಲಾಗುತ್ತದೆ.
ಸಾರ್ವಜನಿಕ ಸ್ಥಳಗಳಲ್ಲಿ ಅರ್ಧಂಬರ್ಧ ಮಾಸ್ಕ್ ಧರಿಸುವವರಿಗೂ ಸಹ ದಂಡ ವಿಧಿಸಲಾಗುತ್ತದೆ.
ಮಾಸ್ಕ್ ಧರಿಸದೇ ನಿರ್ಲಕ್ಷ್ಯ ತೋರುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ದಂಡವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಆಯಾ ಪೆÇಲೀಸ್ ಠಾಣಾ ವ್ಯಾಪ್ತಿಗೆ ಗುರಿ ನಿಗದಿ ಮಾಡಿ, ದಂಡ ವಸೂಲಿ ಮಾಡುವಂತೆ ಸೂಚನೆ ನೀಡಲಾಗುವುದು ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.