ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ: ಮತ ಎಣಿಕೆ ಕೇಂದ್ರದ ಒಳಗೆ ಹೋಗುವ ವಿಚಾರವಾಗಿ ಪೆÇಲೀಸರು ಮತ್ತು ಅಭ್ಯರ್ಥಿ, ಏಜೆಂಟ್ ಗಳ ನಡುವೆ ಮಾತಿನಚಕ್ಕಮಕ್ಕಿ ನಡೆದು ಪೆÇಲೀಸರ ವಿರುದ್ದ ಧಿಕ್ಕಾರದ ಘೋಷಣೆ ಕೂಗಿ ಪ್ರತಿಭಟನೆ ನಡೆದ ಘಟನೆ ಚಾಮರಾಜನಗರದ ಪಾಲಿಟೆಕ್ನಿಕ್ ಕಾಲೇಜ್ ಮತ ಏಣಿಕೆ ಕೇಂದ್ರದಲ್ಲಿ ಬುಧವಾರ ನಡೆಯಿತು.
ಮತ ಎಣಿಕೆ ಕೇಂದ್ರಕ್ಕೆ ಏಜೆಂಟ್ ಹಾಗೂ ಅಭ್ಯರ್ಥಿಗಳು ಒಳ ಹೋಗುವ ವೇಳೆ ಪೆÇಲೀಸರು ಅವರನ್ನು ತಡೆದರು.
ಇದರಿಂದ ಸಿಟ್ಟಿಗೆದ್ದ ಏಜೆಂಟ್ ಹಾಗೂ ಅಭ್ಯರ್ಥಿಗಳು ಗುರುತಿನ ಚೀಟಿ ಇದ್ದರು ನಮ್ಮನ್ನು ತಡೆಯುವುದೇಕೆ ಎಂದು ಪ್ರಶ್ನಿಸುವ ವೇಳೆ ಸಬ್ ಇನ್ಸ್ ಪೆಕ್ಟರ್ ಹನುಮಂತು ಅವ್ಯಾಚ ಶಬ್ದಗಳಿಂದ ನಿಂದಿಸಿದರು ಎಂದು ಆರೋಪಿಸಿ ಏಜೆಂಟ್ ಹಾಗೂ ಅಭ್ಯರ್ಥಿಗಳು ಪ್ರತಿಭಟನೆಗೆ ಮುಂದಾಗಿ ಪೆÇಲೀಸ್ ಸಬ್ ಇನ್ಸ್ ಪೆಕ್ಟರ್ ವಿರುದ್ಧ ಧಿಕ್ಕಾರ ಕೂಗಿದರು.
ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಮುಂದಾದರು.
ಪಟ್ಟು ಬಿಡದ ಪ್ರತಿಭಟನಾಕಾರರು ಪೆÇಲೀಸ್ ಸಬ್ ಇನ್ಸ್ ಪೆಕ್ಟರ್ ಹನುಮಂತಪ್ಪ ಕ್ಷಮೆಕೇಳಬೇಕು ಎಂದು ಪಟ್ಟು ಹಿಡಿದರು. ಪರಿಸ್ಥಿತಿ ಶಾಂತಗೊಳಿಸಲು ಪೆÇಲೀಸ್ ಸಬ್ ಇನ್ಸ್ ಪೆಕ್ಟರ್ ಹನುಮಂತಪ್ಪ ಪ್ರತಿಭಟನಾಕಾರರ ಕ್ಷಮೆಯಾಚಿಸಿದರು.