ಬಿ ಎಸ್ ವೈ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ
ಬಿ.ಎಸ್‌.ಯಡಿಯೂರಪ್ಪ ವಿರುದ್ಧ
ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.

ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ.

ಹಾಗಾಗಿ ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.