ಮೈಸೂರು: ನಗರದ ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಗೆ ಬರುವ ವಾರ್ಡ್ ನಂ. 62ರ ದರ್ಮಸಿಂಗ್ ಕಾಲೋನಿ ಬಿ ಬ್ಲಾಕ್ ನಲ್ಲಿ ಗುಡಿಸಿಲಿನಲ್ಲಿ ವಾಸವಾಗಿದ್ದವರಿಗೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆಗಳನ್ನು ನಿರ್ಮಿಸಿ ಮನೆ ಮಂಜೂರಾತಿ ಪತ್ರವನ್ನು ಸೋಮವಾರ ಕ್ಷೇತ್ರದ ಶಾಸಕ ಎಸ್. ಎ. ರಾಮದಾಸ್ ಫಲಾನುಭವಿಗಳಿಗೆ ವಿತರಿಸಿದರು.
ರಾಜ್ಯ ಸರ್ಕಾರದ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಆವಾಸ್ ಯೋಜನೆ-ಸರ್ವರಿಗೂ ಸೂರು ಯೋಜನೆಯೊಂದಿಗೆ ಸಮನ್ವಯಗೊಳಿಸಿ ಅನುಷ್ಠಾನಗೊಳಿಸಲಾಗಿದೆ.
ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಕಾಮಗಾರಿಯನ್ನು ತ್ವರಿತವಾಗಿ ಮನೆ ನಿರ್ಮಾಣ ಮಾಡುವುದಲ್ಲದೆ, ಮಂಜೂರಾತಿ ಪತ್ರವನ್ನು ಶಾಸಕ ಎಸ್. ಎ. ರಾಮದಾಸ್ ಒಟ್ಟು 55 ಜನ ಫಲಾನುಭವಿಗಳಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಬಿ.ಜೆ.ಪಿ. ನಗರ ಎಸ್.ಸಿ.ಮೋರ್ಚಾದ ಅಧ್ಯಕ್ಷ ಈಶ್ವರ್, ಕೆ.ಆರ್.ಕ್ಷೇತ್ರದ ಎಸ್.ಸಿ.ಮೋರ್ಚಾದ ಅಧ್ಯಕ್ಷ ಮುರುಳಿ, ಸಾಮಾಜಿಕ ಕಾರ್ಯಕರ್ತ ಸುಬ್ಬರಾವ್, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಎಕ್ಸಿಕ್ಯಟಿವ್ ಇಂಜಿನಿಯರ್ ಹರೀಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.