ನವದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಮ್ ಸಿಂಗ್ ಯಾದವ್ ಅವರ ಕಿರಿಯ ಸೊಸೆ ಅಪರ್ಣ ಯಾದವ್ ಅವರು ಬುಧವಾರ ನವದೆಹಲಿಯಲ್ಲಿ ಬಿಜೆಪಿ ಸೇರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ, ಜನಪರ ಆಡಳಿತ ಹಾಗೂ ಬಿಜೆಪಿ ಸಿದ್ದಾಂತದಿಂದ ಪ್ರಭಾವಿತರಾಗಿ ಬಿಜೆಪಿ ಸದಸ್ಯತ್ವನ್ನು ಸ್ವೀಕರಿಸಿರುವ ಅಪರ್ಣ ಯಾದವ್ ಅವರಿಗೆ ಸಚಿವೆ ಶೋಭಾ ಕರಂದ್ಲಾಜೆ ಪಕ್ಷಕ್ಕೆ ಹಾರ್ದಿಕವಾಗಿ ಸ್ವಾಗತ ಕೋರಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಇತರ ಹಿರಿಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ಅಪರ್ಣ ಯಾದವ್ ಬಿಜೆಪಿಗೆ ಸೇರ್ಪಡೆಗೊಂಡರು.