ಕರ್ನಾಟಕ ಬಂದ್ ಗೆ ಮೈಸೂರಲ್ಲಿ ಮಿಶ್ರ ಪ್ರತಿಕಿಯೆ

ಮೈಸೂರು, ಸೆ. 28- ಕರ್ನಾಟಕ ಬಂದ್ ಗೆ ಮೈಸೂರಿನಲ್ಲಿ ಮಿಶ್ರ ಪ್ರತಿಕಿಯೆ ವ್ಯಕ್ತವಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಕೃಷಿ, ಎಪಿಎಂಸಿ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ಸೋಮವಾರ ಕರೆನೀಡಲಾಗಿದ್ದ ಕರ್ನಾಟಕ ಬಂದ್ ಗೆ ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪ್ರತಿಭಟನಾಕಾರರು ಬೆಳ್ಳಂಬೆಳಿಗ್ಗೆಯೇ ಬಬೀದಿಗಿಳಿದು ಪ್ರತಿಭಟನೆ ನಡೆಸಿದರು.
ನಗರದ ಸಬರ್ಬನ್ ಬಸ್ ನಿಲ್ದಾಣದ ಬಳಿ ಕೆಲವು ಪ್ರತಿಭಟನಾಕಾರರು ರಸ್ತೆಯಲ್ಲಿಯೇ ಮಲಗಿ ಪ್ರತಿಭಟನೆ ನಡೆಸಿ, ಬಸ್ ಗಳ ಸಂಚಾರಕ್ಕೆ ಅಡ್ಡಿಪಡಿಸಿದರು.
ಈ ಸಂದರ್ಭ ಪ್ರತಿಭಟನಕಾರರ ಪ್ರತಿರೋಧದ ನಡುವೆಯೂ ಪೆÇಲೀಸರು ಒಂದು ಬಸ್ ಕಳುಹಿಸಿದರು. ಮತ್ತೊಂದು ಬಸ್ ಅನ್ನು ಮುಂದೆ ಚಲಿಸದಂತೆ ಕುಳಿತು ಪ್ರತಿಭಟನಕಾರರು ತಡೆದಿದ್ದರು.
ರೈತ ವಿರೋಧಿ ಮಸೂದೆಗಳ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೊಷಣೆ ಕೂಗಿದರು.
ಪ್ರತಿಭಟನೆಯ ವೇಳೆ ಪೆÇಲೀಸರು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆಯಿತು.
ಬಸ್ ನಿಲ್ದಾಣದಲ್ಲಿ ಪ್ರತಿಭಟನೆಗಿಳಿದ ಹೋರಾಟಗಾರರನ್ನು ಡಿಸಿಪಿ ಡಾ.ಎ.ಎನ್ ಪ್ರಕಾಶ್ ಗೌಡ ತರಾಟೆಗೆ ತೆಗೆದುಕೊಂಡರು. ಕಾನೂನಾತ್ಮಕವಾಗಿಯೇ ಹೋರಾಟವನ್ನು ಮಾಡಿ. ಕೊರೊನಾ ಆತಂಕದ ನಡುವೆಯೂ ಗುಂಪುಗುಂಪಾಗಿ ಪ್ರತಿಭಟನೆ ನಡೆಸುತ್ತಿದ್ದೀರಿ ಎಂದು ಪ್ರತಿಭಟನಾಕಾರರಿಗೆ ತಿಳಿ ಹೇಳಿ, ಬಂದ್ ಹಿನ್ನೆಲೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.
ನಗದಲ್ಲಿ ಸರ್ಕಾರಿ ಬಸ್ ಸಂಚಾರ ಎಂದಿನಂತೆಯೇ ಇದೆ. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರಿಲ್ಲದ ಕಾರಣ ಹೆಚ್ಚಿನ ಬಸ್ ಗಳು ಓಡಾಟ ನಡೆಸಿಲ್ಲ.
ನಗರದ ಕೋಟೆ ಆಂಜನೇಯ ದೇವಸ್ಥಾನ ಬಳಿ ಪ್ರತಿಭಟನಾ ನಿರತರನ್ನು ಪೊಲೀಸರು ಬಂಧಿಸಿದ್ದಾರೆ.
ಕೆಲವು ರಿಕ್ಷಾ ಚಾಲಕರು, ಖಾಸಗಿ ವಾಹನಗಳು ಕೂಡ ಎಂದಿನಂತೆ ಸಂಚರಿಸುತ್ತಿವೆ.
ಅರಸು ರಸ್ತೆಯಲ್ಲಿ ಕೆಲವು ಅಂಗಡಿಗಳು ಮುಚ್ಚಿವೆ. ಇನ್ನು ಕೆಲವರು ಮಳಿಗೆ ತೆರೆದು ವ್ಯಾಪಾರ ನಡೆಸುತ್ತಿದ್ದಾರೆ. ಸಂತೆ ಪೇಟೆ, ಶಿವರಾಮ ಪೇಟೆ, ಅಶೋಕ ರಸ್ತೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಕೂಡ ತೆರೆಯಲಾಗಿದೆ.
ನಗರದ ಬಂಡಿಪಾಳ್ಯದ ಎಪಿಎಂಸಿ ಬಂದ್ ಮಾಡಲಾಗಿದೆ. ವರ್ತಕರ ಸಂಘ, ಕಾರ್ಮಿಕರ ಸಂಘಟನೆ, ದಸಂಸ ಬಂದ್ ಗೆ ಬೆಂಬಲ ಸೂಚಿಸಿದೆ.
ಬಂದ್ ಗೆ ಕ್ಯಾಬ್, ಟ್ಯಾಕ್ಸಿ, ಲಾರಿ ಮಾಲೀಕರು, ಕನ್ನಡ ಪರ ಕೆಲ ಸಂಘಟನೆಗಳು ಸೇರಿ ಹಲವರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಕೃಷಿ ಹಾಗೂ ಕಾರ್ಮಿಕ ಮಸೂದೆಗಳನ್ನು ವಿರೋಧಿಸಿ ರೈತ-ದಲಿತ-ಕಾರ್ಮಿಕ ಐಕ್ಯ ಹೋರಾಟ, ಎಐಟಿಯುಸಿ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಹೊಟೆಲ್ ಗಳು ಮೈಸೂರಿನಾದ್ಯಂತ ತೆರೆದಿವೆ. ಹೊಟೇಲ್ ಮಾಲೀಕರ ಸಂಘ ನೈತಿಕ ಬೆಂಬಲ ನೀಡಿದೆ. ಪೆಟ್ರೋಲ್ ಬಂಕ್ ಗಳು ಎಂದಿನಂತೆ ತಮ್ಮ ವ್ಯಾಪಾರ ವಹಿವಾಟು ನಡೆಸುತ್ತಿವೆ.
ಪ್ರತಿಭಟನಾ ಸ್ಥಳಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೆÇಲೀಸ್ ಬಂದೋಬಸ್ತ್ ಮಾಡಲಾಗಿದೆ.