ರೈತರಿಂದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್

ಮೈಸೂರು: ರೈತರು ಮೈಸೂರಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಅವರಿಗೆ ಘೇರಾವ್ ಹಾಕಿ ಪ್ರತಿಭಟಿಸಿದರು.
ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಅಂಗೀಕರಿಸದಂತೆ ಒತ್ತಾಯಿಸಿ ರೈತರು ಗನ್ ಹೌಸ್ ವೃತ್ತದ ಬಳಿ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಘೇರಾವ್ ಹಾಕಿದರು.
ರೈತರು ಹಲವು ಬಾರಿ ಪ್ರತಿಭಟನೆ ನಡೆಸಿದರೂ ಸರ್ಕಾರ ನಮ್ಮ ಸಮಸ್ಯೆ ಪರಿಹಾರಕ್ಕೆ ಮುಂದಾಗಿಲ್ಲ ಎಂದು ರೈತ ಮುಖಂಡರು ದೂರಿದರು.
ಈ ಸಂದರ್ಭದಲ್ಲಿ ರೈತರು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.
ಸ್ಥಳದಲ್ಲಿದ್ದ ಪೆÇಲೀಸರು ರೈತರನ್ನು ಚದುರಿಸಿದರು.
ಪ್ರತಿಭಟನಾ ನಿರತರೊಂದಿಗೆ ಸಚಿವರು ಮಾತನಾಡಿ, ಸೆ. 26ಕ್ಕೆ ಸಭೆ ಕರೆಯಲಾಗಿದೆ. ಅಂದು ರೈತ ಮುಖಂಡರೊಂದಿಗೆ ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದೆಂದರು.