ಮೈಕ್ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ:ಈಶು ಹೊಸ ವಿವಾದ

ಮಂಗಳೂರು: ಮೈಕ್ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ ಎಂದು ಹೇಳುವ ಮೂಲಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೊಸ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು ಎಂದು ಹೇಳಿದ್ದಾರೆ

ಈಶ್ವರಪ್ಪ ಮಂಗಳೂರಿನ ಕಾವೂರಿನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಭಾಷಣ‌ ಮಾಡುವಾಗ ಆರಂಭವಾದ ಆಝಾನ್‍ಗೆ ಹೀಗೆ ಈಶ್ವರಪ್ಪ ಸಿಡಿಮಿಡಿಯಾಗಿದ್ದಾರೆ.

ಈಶ್ವರಪ್ಪ ಭಾಷಣ ಮಾಡ್ತಿದ್ದಾಗ ಸ್ಥಳೀಯ ಮಸೀದಿಯಿಂದ ಆಝಾನ್  ಕೇಳಿಬಂತು. ಇದಕ್ಕೆ ಸಿಟ್ಟಾದ ಈಶರಪ್ಪ ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂದು ಪ್ರಶ್ನಿಸಿದರು.

ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ ಬೇಡ.

ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂದು ಕಿಡಿಯಾದರು.

ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ.

ಆದ್ದರಿಂದ ಈ ಸಮಸ್ಯೆ ಆದಷ್ಟು ಬೇಗ ಪರಿಹಾರ ಆಗಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ.