ರಾಜಕಾರಣಿಗಳಿಂದ ಡ್ರಗ್ಸ್ ದಂಧೆ: ಮೈಸೂರು ಕಾಲೇಜುಗಳಲ್ಲೂ ಡ್ರಗ್ಸ್ ಮಾರಾಟ -ಪ್ರಮೋದ್ ಮುತಾಲಿಕ್

ಮೈಸೂರು: ರಾಜಕಾರಣಿಗಳೇ ಡ್ರಗ್ಸ್ ದಂಧೆ ನಡೆಸುತ್ತಿದ್ದಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಮೋದ್ ಮುತಾಲಿಕ್ ಮಾತನಾಡಿದರು.
ನನ್ನ ಬಳಿ 32 ಮಂದಿ ರಾಜಕಾರಣಿಗಳ ಪಟ್ಟಿ ಇದೆ. ಅದನ್ನು ಅತೀ ಶೀಘ್ರದಲ್ಲಿಯೇ ಬಿಡುಗಡೆ ಮಾಡುತ್ತೇನೆ ಎಂದು ಅವರು ಹೇಳಿದರು.

ರಾಜಕಾರಿಣಿಗಳು ಮತ್ತವರ ಮಕ್ಕಳೇ ಇದರಲ್ಲಿ ಶಾಮೀಲಾಗಿದ್ದಾರೆಂದ ಅವರು, ಸಾವಿರಾರು ಕೋಟಿ ದಂಧೆ ಮಾಡುತ್ತಿದ್ದಾರೆ. ರಾಜಕಾರಣಿಗಳೇ ಪೆÇಲೀಸರ ಕೈಕಟ್ಟಿ ಹಾಕಿದ್ದಾರೆಂದು ಹೇಳಿದರು.
ಮೈಸೂರಿನ ಕಾಲೇಜುಗಳಲ್ಲೂ ಡ್ರಗ್ಸ್ ದಂಧೆ ನಡೀತಿದೆ ಎಂದು ಆರೋಪಿಸಿದ ಅವರು ಶಾಲಾ, ಕಾಲೇಜುಗಳ ಆವರಣದಲ್ಲಿ ಡ್ರಗ್ ಸಿಗುತ್ತೆ. ಇದು ಪೆÇೀಷಕರು, ಪಾಲಕರು, ಶಿಕ್ಷಕರಿಗೆ ಗೊತ್ತಿದೆ ಎಂದರು.
ಈಗಲೂ ಹಾಸ್ಟೆಲ್ ಗಳ ಮೇಲೆ ದಾಳಿ ಮಾಡಿ. ನಾನು ಚಾಲೆಂಜ್ ಮಾಡುತ್ತೇನೆ. ಹಾಸ್ಟೆಲ್ ಗಳಳನ್ನು ಚೆಕ್ ಮಾಡಿದರೆ ಡ್ರಗ್ಸ್, ಹೆರಾಯಿನ್ ಎಲ್ಲವೂ ಸಿಗುತ್ತವೆ ಎಂದು ಆರೋಪಿಸಿದರು.
ಶಾಲಾ ಕಾಲೇಜುಗಳಲ್ಲಿ ನಾವು ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ಪ್ರಮೋದ್ ಮುತಾಲಿಕ್ ತಿಳಿಸಿದರು.