ಮೈಸೂರು: ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆಯನ್ನ ಮೈಸೂರು ಪೆÇಲೀಸರು ಬಂಧಿಸಿದ್ದಾರೆ.
ಇಬ್ಬರು ಮಹಿಳೆಯರ ರಕ್ಷಣೆ ಮಾಡಿದ್ದಾರೆ.
ಸಂಘಟತ ಅಪರಾಧ ಮತ್ತು ರೌಡಿ ಪ್ರತಿಬಂಧಕ ದಳ ಮತ್ತು ವಿಜಯನಗರ ಪೆÇಲೀಸರಿಗೆ ದೊರೆತ ಮಾಹಿತಿ ಮೇರೆಗೆ ವಿಜಯನಗರ 4ನೇ ಹಂತದಲ್ಲಿನ ಮನೆಯೊಂದರ ಮೇಲೆ ದಾಳಿ ಮಾಡಿ, ಮಹಿಳೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ.
ಈ ವೇಳೆ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.
ವೇಶ್ಯಾವಾಟಿಕೆಗೆ ಬಳಕೆಯಾಗಿದ್ದ 31,500 ರೂ ನಗದು ಹಣ, ಒಂದು ಮೊಬೈಲ್ ಫೆÇೀನ್, ಒಂದು ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ವಿಜಯನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ನಗರದ ಡಿಸಿಪಿ ಗೀತ ಪ್ರಸನ್ನ ಹಾಗೂ ಸಿಸಿಬಿ ಘಟಕದ ಎಸಿಪಿ ಸಿ.ಕೆ ಅಶ್ವಥನಾರಾಯಣ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಪಿ.ಐ ಎ.ಮಲ್ಲೇಶ್, ವಿಜಯನಗರ ಪೆÇಲೀಸ್ ಠಾಣೆಯ ಪಿ.ಐ ಬಾಲಕೃಷ್ಣ, ಸಿಬ್ಬಂದಿಗಳಾದ ರಾಧೇಶ್, ಜೋಸೆಫ್, ಮಮತಾ, ಕೆ.ಜಿ ಶ್ರೀನಿವಾಸ್ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.