ಸಿಎಂ, ಗೃಹ ಸಚಿವರು ಡ್ರಗ್ಸ್ ದಂಧೆ ಮಟ್ಟಹಾಕಲು ಶ್ರಮಿಸುತ್ತಿದ್ದಾರೆ -ವಿಜಯೇಂದ್ರ

ಮೈಸೂರು: ಮುಖ್ಯಮಂತ್ರಿಗಳು ಗೃಹ ಸಚಿವರು ಡ್ರಗ್ಸ್ ದಂಧೆ ಮಟ್ಟಹಾಕಲು ಶ್ರಮಿಸುತ್ತಿದ್ದಾರೆ ಬಿಜೆಪಿ ಉಪಾಧ್ಯಕ್ಷ ಹಾಗೂ ಸಿಎಂ ಪುತ್ರ ವಿಜಯೇಂದ್ರ ಹೇಳಿದ್ದಾರೆ.
ನಗರದಲ್ಲಿ ಅವರು ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ಸರ್ಕಾರ ಕೆಲಸ ಮಾಡುತ್ತಿದೆ ಎಂದರು.
ಯಾವುದೇ ಕಾರಣಕ್ಕೂ ಯಾವುದೇ ಪ್ರಭಾವಕ್ಕೂ ನಮ್ಮ ಸರ್ಕಾರ ಮಣಿಯುವುದಿಲ್ಲ ಎಂದು ಅವರು ಹೇಳಿದರು.
ಡ್ರಗ್ಸ್ ದಂಧೆ ನಿಯಂತ್ರಿಸಲು ಈ ಹಿಂದೆ ಯಾವ ಸರ್ಕಾರವು ಮಾಡದ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಅವರು ತಿಳಿಸಿದರು.
ರಾಗಿಣಿ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರಲ್ಲ ಎಂಬ ಪ್ರಶ್ನೆಗೆ ವಿಜಯೇಂದ್ರ ಉತ್ತರಿಸಿ, ಕೆಲ ನಟ ನಟಿಯರು ಒಂದೇ ಚುನಾವಣೆಯಲ್ಲಿ ಬೇರೆ ಬೇರೆ ಪಕ್ಷದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಾರೆ. ಅದೇ ಪಕ್ಷದವರು ಎಂದು ಹೇಳಲು ಸಾಧ್ಯವಿಲ್ಲ ಎಂದರು.
ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಡಿದವರು ಹಿಂದೆಯು ಮಾಡಿದ್ದರು. ಮುಂದೆಯು ಮಾಡುತ್ತಾರೆ.
ಭ್ರಷ್ಟಾಚಾರ ಆರೋಪಕ್ಕೆ ಸಾಕ್ಷಿ ಇದ್ದರೆ ಬೇಗ ಬಿಡುಗಡೆ ಮಾಡಲಿ ಅಂತ ನಾನು ಕೂಡ ಕೇಳಿಕೊಳ್ಳುತ್ತೇನೆ. ನಾನು ಈ ವಿಚಾರಕ್ಕೆ ತಲೆಕೆಡಿಸುಕೊಳ್ಳುವುದಿಲ್ಲ ಎಂದರು.