ಬೆಂಗಳೂರಿನ 32 ಕಡೆ ಎನ್‍ಐಎ ದಾಳಿ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಬೆಂಗಳೂರಿನ 32 ಕಡೆ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಗುರುವಾರ ದಾಳಿ ನಡೆಸಿದೆ.
ದಾಳಿ ವೇಳೆ ಎನ್‍ಐಎ ಮಹತ್ವದ ಮಾಹಿತಿ ಕಲೆ ಹಾಕಿದೆ ಎಂದು ತಿಳಿದು ಬಂದಿದೆ.
ಹಲವು ಆರೋಪಿಗಳನ್ನು ಸಿಸಿಬಿ ಬಂಧಿಸಿದೆ.
ಆರೋಪಿಗಳ ಪೈಕಿ ಕೆಲವರಿಗೆ ಭಯೋತ್ಪಾದಕರೊಂದಿಗೆ ನಂಟಿರುವ ಬಗ್ಗೆ ಎನ್‍ಐಎ ತನಿಖೆ ಕೈಗೊಂದಿದೆ.