ಮೈಸೂರು: ಹಳೆ ಮೈಸೂರು ಭಾಗದಲ್ಲಿ ಪಕ್ಷದ ಸಂಘಟನೆ ಕೊರತೆ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಹೇಳಿದರು.
ಬಿ.ವೈ ವಿಜಯೇಂದ್ರ ಬುಧವಾರ ನಂಜನಗೂಡು ಶ್ರೀ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬಿವೈವಿ ಮಾತನಾಡಿದರು.
ಹಳೆ ಮೈಸೂರು ಭಾಗದಲ್ಲಿ ಪಕ್ಷದ ಸಂಘಟನೆ ಕೊರತೆ ಇದೆ. ಆದ್ದರಿಂದ ಮಂಡ್ಯ, ಮೈಸೂರು, ಚಾಮರಾಜನಗರ ಕ್ಷೇತ್ರಗಳನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಜೊತೆ ಕೈಜೋಡಿಸಿ ಈ ಭಾಗದಲ್ಲಿ ಹೆಚ್ಚು ಪ್ರವಾಸಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದರು.
ಮುಂದೆ ಬರುವಂತಹ ಗ್ರಾಮ ಪಂಚಾಯತ್ ಚುನಾವಣೆಗಳು ನಾಯಕತ್ವ ಸೃಷ್ಟಿ ಮಾಡುವಂತಹ ಚುನಾವಣೆಗಳಾದ್ದರಿಂದ ಪ್ರವಾಸ ಕೈಗೊಂಡಿದ್ದೇನೆ.
ಪಕ್ಷದ ಕಾರ್ಯಕರ್ತರ ಮೇಲೆ ನಂಬಿಕೆ ಇದೆ. ಬರುವಂತಹ ಚುನಾವಣೆಗಳು ನಿಮ್ಮ ಚುನಾವಣೆ ಎಂದು ಎದುರಿಸಬೇಕು. ಅವರು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಜಯೇಂದ್ರ ಹೇಳಿದರು.