ಸಚಿವರು, ಶಾಸಕರ ನಡುವೆ ಗಲಾಟೆ

ಬೆಂಗಳೂರು: ಸಚಿವರು ಮತ್ತು ಶಾಸಕರ ಗಲಾಟೆ ನಡೆದಿರುವ ಘಟನೆ ಸೋಮವಾರ ನಡೆದಿದೆ.
ಸಚಿವ ನಾರಾಯಣಗೌಡ ಮತ್ತು ಕಡೂರು ಶಾಸಕ ಬೆಳ್ಳಿ ಪ್ರಕಾಶ್ ನಡುವೆ ವಿಧಾನಸೌಧದ ಲಾಂಜ್‍ನಲ್ಲಿರುವ ಕ್ಯಾಂಟೀನ್‍ನಲ್ಲಿ ಜಗಳ ನಡೆದಿದೆ.
ಈ ಗಲಾಟೆ ಹೊಡೆದಾಟದ ಹಂತಕ್ಕೂ ಹೋಗಿದೆ ಎಂದು ಹೇಳಲಾಗಿದೆ.
ಕಡೂರು ಕ್ಷೇತ್ರಕ್ಕೆ ನೀಡಬೇಕಿದ್ದ ಅನುದಾನ ತಾರತಮ್ಯವಾದ ಹಿನ್ನೆಲೆಯಲ್ಲಿ ಗಲಾಟೆ ನಡೆದಿದೆ ತಿಳಿದು ಬಂದಿದೆ.
ಅನುದಾನ ತಾರತಮ್ಯ ದಿಂದ ಅಸಮಾಧನಾಗೊಂಡಿದ್ದ ಶಾಸಕ ಬೆಳ್ಳಿ ಪ್ರಕಾಶ್ ಕ್ಯಾಂಟೀನ್‍ನಲ್ಲಿ ಅನುದಾನ ಬಿಡುಗಡೆ ಮಾಡದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.
ಈ ಸಂದರ್ಭದಲ್ಲಿ ಶಾಸಕ ಬೆಳ್ಳಿ ಪ್ರಕಾಶ್ ಅವರು ಸಚಿವ ನಾರಾಯಣಗೌಡ ಅವರಿಗೆ ಏಕವಚನದಲ್ಲಿ ಬೈದಿದ್ದಾರೆ ಎಂದು ತಿಳಿದು ಬಂದಿದೆ.