ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ ಜನ್ಮದಿನ ಆಚರಣೆ ಮೂಲಕ ಗಣರಾಜ್ಯೋತ್ಸವದ ಆಚರಣೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಜನವರಿ 26 ಗಣರಾಜ್ಯೋತ್ಸವ ದಿನವಾದರೆ ಜನವರಿ 23 ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನವಾಗಿದೆ.
ಪ್ರತಿ ವರ್ಷ ಗಣರಾಜ್ಯತ್ಸವದ ಆಚರಣೆಗಳು ಜನವರಿ 24ರಿಂದ ಆರಂಭವಾಗುತ್ತಿದ್ದವು. ಇನ್ನು ಮುಂದೆ ನೇತಾಜಿ ಜನ್ಮ ದಿನಾಚರಣೆಯ ಜೊತೆಯಲ್ಲೇ ಗಣರಾಜ್ಯೋತ್ಸವದ ಆಚರಣೆಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ನೇತಾಜಿ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಹನೀಯರ ಜನ್ಮದಿನಾಚರಣೆಗಳನ್ನು ವಿವಿಧ ಹೆಸರಿನಲ್ಲಿ ಜಾರಿಗೆ ತರುವ ಮೂಲಕ ಗಮನ ಸೆಳೆದಿದೆ.
ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನ ಆಗಸ್ಟ್ 14 ಅನ್ನು ದೇಶ ವಿಭಜನೆಯ ಕರಾಳ ದಿನವನ್ನಾಗಿ ಆಚರಿಸಲಾಗುತ್ತಿದೆ.
ಅಕ್ಟೋಬರ್ 31 ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಿದರೆ, ನವೆಂಬರ್ 15 ಅನ್ನು ಬಿರ್ಸಾ ಮುಂಡಾ ಅವರ ಜನ್ಮ ದಿನವನ್ನು ಜನಜಾಗೃತಿ ಗೌರವ್ ದಿವಸ್ ಆಗಿ ಆಚರಿಸಲಾಗುತ್ತಿದೆ.